alex Certify ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿವಾಸದ ಮೇಲೆ ʻCBIʼ ದಾಳಿ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿವಾಸದ ಮೇಲೆ ʻCBIʼ ದಾಳಿ!

ನವದೆಹಲಿ: ಕಿರು ಜಲವಿದ್ಯುತ್ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರ ಮನೆ ಸೇರಿದಂತೆ ಇತರ 29 ಸ್ಥಳಗಳಲ್ಲಿ ಸಿಬಿಐ ಗುರುವಾರ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಬಿಐ ಹಲವಾರು ನಗರಗಳ 30 ಸ್ಥಳಗಳಲ್ಲಿ ಬೆಳಿಗ್ಗೆ ದಾಳಿ ನಡೆಸಿದ್ದಾರೆ. 2,200 ಕೋಟಿ ರೂ.ಗಳ ಕಿರು ಜಲವಿದ್ಯುತ್ ಯೋಜನೆ (ಎಚ್ಇಪಿ) ಗಾಗಿ ಸಿವಿಲ್ ಕಾಮಗಾರಿಗಳನ್ನು ನೀಡುವಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ.

ಮಲಿಕ್ ಅವರು 23 ಆಗಸ್ಟ್ 2018 ರಿಂದ 30 ಅಕ್ಟೋಬರ್ 2019 ರವರೆಗೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದರು. ಎರಡು ಕಡತಗಳನ್ನು ತೆರವುಗೊಳಿಸಲು ತನಗೆ 300 ಕೋಟಿ ರೂ.ಗಳ ಲಂಚದ ಆಮಿಷ ಒಡ್ಡಲಾಗಿತ್ತು ಎಂದು ಅವರು ಹೇಳಿಕೊಂಡಿದ್ದರು.

ಚೆನಾಬ್ ವ್ಯಾಲಿ ಪವರ್ ಪ್ರಾಜೆಕ್ಟ್ಸ್ (ಪಿ) ಲಿಮಿಟೆಡ್ ಮಾಜಿ ಅಧ್ಯಕ್ಷ ನವೀನ್ ಕುಮಾರ್ ಚೌಧರಿ, ಇತರ ಮಾಜಿ ಕಾರ್ಯನಿರ್ವಾಹಕರಾದ ಎಂ.ಎಸ್.ಬಾಬು, ಎಂ.ಕೆ.ಮಿತ್ತಲ್ ಮತ್ತು ಅರುಣ್ ಕುಮಾರ್ ಮಿಶ್ರಾ ಮತ್ತು ಪಟೇಲ್ ಎಂಜಿನಿಯರಿಂಗ್ ಲಿಮಿಟೆಡ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...