ನವದೆಹಲಿ: ಮಾಜಿ ಜನರಲ್ ಮ್ಯಾನೇಜರ್ ಸೇರಿದಂತೆ 21 ಬಿಎಸ್ಎನ್ಎಲ್ ಅಧಿಕಾರಿಗಳ ವಿರುದ್ಧ ದಾಖಲಾದ ಎಫ್ಐಆರ್ ಗೆ ಸಂಬಂಧಿಸಿದಂತೆ ಸಿಬಿಐ 25 ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್ಎನ್ಎಲ್) ಗೆ ಮೋಸ ಮಾಡಲು ಆರೋಪಿ ಅಧಿಕಾರಿಗಳು ಗುತ್ತಿಗೆದಾರನೊಂದಿಗೆ ಪಿತೂರಿ ನಡೆಸಿದ್ದಾರೆ ಎಂದು ಪ್ರಧಾನ ತನಿಖಾ ಸಂಸ್ಥೆ ಆರೋಪಿಸಿದೆ.
ಜೋರ್ಹತ್, ಸಿಬ್ಸಾಗರ್, ಗುವಾಹಟಿ ಮತ್ತು ಇತರ ಸ್ಥಳಗಳಲ್ಲಿ ಮಾಜಿ ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಮತ್ತು ಮುಖ್ಯ ಲೆಕ್ಕಾಧಿಕಾರಿ ಸೇರಿದಂತೆ ಬಿಎಸ್ಎನ್ಎಲ್ ಅಸ್ಸಾಂ ವೃತ್ತದ ಅಧಿಕಾರಿಗಳ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ. “ರಾಷ್ಟ್ರೀಯ ಆಪ್ಟಿಕಲ್ ಫೈಬರ್ ನೆಟ್ವರ್ಕ್ ಕೇಬಲ್ ಅನ್ನು ತೆರೆದ ಟ್ರೆಂಚಿಂಗ್ ವಿಧಾನದ ಮೂಲಕ ಪ್ರತಿ ಕಿ.ಮೀ.ಗೆ 90,000 ರೂ.ಗಳಂತೆ ಹಾಕಲು ಗುತ್ತಿಗೆದಾರನಿಗೆ ವರ್ಕ್ ಆರ್ಡರ್ ನೀಡಲಾಗಿದೆ ಎಂದು ಆರೋಪಿಸಲಾಗಿದೆ” ಎಂದು ಸಿಬಿಐ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.