alex Certify BIG BREAKING: CBSE 10, 12 ನೇ ತರಗತಿ ಪರೀಕ್ಷೆಗೆ ದಿನಾಂಕ ಪ್ರಕಟ -ಮೇ 4 ರಿಂದಲೇ ಎಕ್ಸಾಮ್, ಜುಲೈ 15 ರಿಸಲ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: CBSE 10, 12 ನೇ ತರಗತಿ ಪರೀಕ್ಷೆಗೆ ದಿನಾಂಕ ಪ್ರಕಟ -ಮೇ 4 ರಿಂದಲೇ ಎಕ್ಸಾಮ್, ಜುಲೈ 15 ರಿಸಲ್ಟ್

ವದೆಹಲಿ: ಮೇ 4 ರಿಂದ ಸಿಬಿಎಸ್ಇ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದ್ದು, ಜೂನ್ 10 ರವರೆಗೆ ಪರೀಕ್ಷೆ ನಡೆಯಲಿದೆ. ಜುಲೈ 15 ರಂದು ಸಿಬಿಎಸ್ಇ ಫಲಿತಾಂಶವನ್ನು ಪ್ರಕಟಿಸಲಾಗುವುದು.

ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಈ ಬಗ್ಗೆ ಮಾಹಿತಿ ನೀಡಿ, ಸಿಬಿಎಸ್ಇ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಮೇ 4 ರಿಂದ ನಡೆಯಲಿದೆ ಎಂದು ತಿಳಿಸಿದ್ದಾರೆ.

ಈ ಮೊದಲೇ ಸಚಿವರು ಡಿಸೆಂಬರ್ 31 ರಂದು ಪರೀಕ್ಷೆಗೆ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದರು. ಸಿಬಿಎಸ್ಇ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಫೆಬ್ರವರಿ ನಂತರವೇ ನಡೆಸುವುದಾಗಿ ಮಾಹಿತಿ ನೀಡಿದ್ದರು. ಅಂತೆಯೇ ಇಂದು ದಿನಾಂಕ ಪ್ರಕಟಿಸಲಾಗಿದ್ದು, ಮೇ 4 ರಿಂದ ಪರೀಕ್ಷೆಗೆ ದಿನಾಂಕ ನಿಗದಿ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...