ನವದೆಹಲಿ: ದೇಶದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಬಿಎಸ್ಇ 12 ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲು ಚಿಂತನೆ ನಡೆದಿದೆ.
ಮೇ 17 ರಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ನೇತೃತ್ವದಲ್ಲಿ ಸಭೆ ನಡೆಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ದೇಶದಲ್ಲಿ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ಏರಿಕೆಯಾದ ಹಿನ್ನೆಲೆಯಲ್ಲಿ ಸಿಬಿಎಸ್ಇ 12 ನೇ ತರಗತಿ ಪರೀಕ್ಷೆ ರದ್ದು ಮಾಡಬೇಕೆಂಬ ಬೇಡಿಕೆ ಹೆಚ್ಚಾಗಿದೆ. ಅನೇಕ ನಾಯಕರು ಕೂಡ ಪರೀಕ್ಷೆ ರದ್ದು ಮಾಡುವ ಬಗ್ಗೆ ಆಗ್ರಹಿಸಿದ್ದಾರೆ.
ಹೀಗಾಗಿ ಎಲ್ಲ ರಾಜ್ಯಗಳ ಶಿಕ್ಷಣ ಕಾರ್ಯದರ್ಶಿಗಳೊಂದಿಗೆ ಸಂವಾದ ನಡೆಸಿದ ನಂತರ ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ರದ್ದುಪಡಿಸಲು ಶಿಕ್ಷಣ ಸಚಿವರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಆನ್ಲೈನ್ ಶಿಕ್ಷಣಕ್ಕೆ ಉತ್ತೇಜನ ಮತ್ತು ಹೊಸ ಶಿಕ್ಷಣ ನೀತಿ ಅನುಷ್ಠಾನ ಕುರಿತಾಗಿ ಸಚಿವರು ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.