
ಬೆಂಗಳೂರು: ಮೇ 20 ರ ನಂತರ ಸಿಬಿಎಸ್ಇ 10, 12ನೇ ತರಗತಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ದೇಶದಾದ್ಯಂತ 37 ಲಕ್ಷಕ್ಕೂ ಅಧಿಕ ಮಕ್ಕಳು ಕಾಯುತ್ತಿರುವ ಈ ಬಾರಿಯ ಸಿಬಿಎಸ್ಸಿ 10 ಮತ್ತು 12ನೇ ತರಗತಿ ಫಲಿತಾಂಶ ಮೇ 70ರ ನಂತರ ಪ್ರಕಟವಾಗುವ ಸಾಧ್ಯತೆ ಇದೆ.
ಕೆಲವರು ಮೇ 1ರಂದು 10 ಮತ್ತು 12ನೇ ತರಗತಿ ಫಲಿತಾಂಶ ಪ್ರಕಟವಾಗಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಿಬಿಟ್ಟು ಗೊಂದಲ ಸೃಷ್ಟಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಪಿಎಸ್ಇ ವತಿಯಿಂದ ಸ್ಪಷ್ಟನೆ ನೀಡಲಾಗಿದ್ದು, ಮೇ 20ರ ನಂತರ 10 ಮತ್ತು 12ನೇ ತರಗತಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.