
ನವದೆಹಲಿ: ಸಿಬಿಎಸ್ಇ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಮೇ 4 ರಿಂದ ಜೂನ್ 10 ರವರೆಗೆ ಪರೀಕ್ಷೆ ನಡೆಯಲಿದೆ. ಜುಲೈ 15 ರಂದು ಫಲಿತಾಂಶ ಪ್ರಕಟಿಸಲಾಗುವುದು.
ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಈ ಬಗ್ಗೆ ಮಾಹಿತಿ ನೀಡಿದ್ದು, ಸಿಬಿಎಸ್ಇ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಮೇ 4 ರಿಂದ ನಡೆಯಲಿದೆ ಎಂದು ತಿಳಿಸಿದ್ದಾರೆ.
ಮಾರ್ಚ್ 1 ರಿಂದ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ. ಸಿಬಿಎಸ್ಇ 10 ಮತ್ತು 12 ನೇ ತರಗತಿ ಪರೀಕ್ಷೆಗಳು ಆನ್ ಲೈನ್ ನಲ್ಲಿ ನಡೆಯುವುದಿಲ್ಲ ಎಂದು ಹೇಳಲಾಗಿದೆ.