alex Certify CBSE 12 ನೇ ತರಗತಿ ಪರೀಕ್ಷೆ ಬರೆಯಲಿಚ್ಛಿಸುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

CBSE 12 ನೇ ತರಗತಿ ಪರೀಕ್ಷೆ ಬರೆಯಲಿಚ್ಛಿಸುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ನವದೆಹಲಿ: ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ಬರೆಯಲಿಚ್ಛಿಸುವ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಸಿಬಿಎಸ್ಇ 12ನೇ ತರಗತಿಯ ಫಲಿತಾಂಶ, ಮೌಲ್ಯಮಾಪನ ಮಾನದಂಡದ ಬಗ್ಗೆ ತೃಪ್ತಿಯಿಲ್ಲದ ವಿದ್ಯಾರ್ಥಿಗಳು ಪ್ರಮುಖ ವಿಷಯಗಳ ಪರೀಕ್ಷೆಯನ್ನು ಬರೆಯಬಹುದು. ಆಗಸ್ಟ್ 15 ರಿಂದ ಸೆಪ್ಟೆಂಬರ್ 15 ರ ನಡುವೆ ಪ್ರಮುಖ ವಿಷಯಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಸಿಬಿಎಸ್ಇ ಮಂಡಳಿ ತಿಳಿಸಿದೆ.

ಸುಪ್ರೀಂಕೋರ್ಟ್ ಗೆ ಈ ಕುರಿತಾಗಿ ಪ್ರಮಾಣ ಪತ್ರ ಸಲ್ಲಿಸಲಾಗಿದ್ದು, ಕೊರೋನಾ ಪರಿಸ್ಥಿತಿ ಆಧರಿಸಿ ಪರೀಕ್ಷೆ ನಡೆಸಲಾಗುವುದು, ಮೌಲ್ಯಮಾಪನ ಮಾನದಂಡ ಮತ್ತು ಫಲಿತಾಂಶದ ಬಗ್ಗೆ ತೃಪ್ತಿಯಿಲ್ಲದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು ಎಂದು ಸುಪ್ರೀಂಕೋರ್ಟ್ಗೆ ಸಿಬಿಎಸ್ಇ ಮಂಡಳಿ ಪ್ರಮಾಣಪತ್ರ ಸಲ್ಲಿಸಿದೆ.

ಫಲಿತಾಂಶ ಕ್ರೋಡಿರಣಕ್ಕೆ ಸಂಬಂಧಿಸಿದಂತೆ ಮಂಡಳಿ ರಚಿಸಿದ ಸಮಿತಿಯ ಪರಾಮರ್ಶೆಗೆ ಒಪ್ಪಿಸಲಾಗುವುದು. ಜುಲೈ 31 ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...