alex Certify ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಉದ್ದೇಶದ ನಾಮ ಮಾತ್ರ ಶಾಲೆ ವಿದ್ಯಾರ್ಥಿಗಳಿಗೆ ಶಾಕ್: 12ನೇ ತರಗತಿ ಪರೀಕ್ಷೆ ಬರೆಯಲು ಅವಕಾಶ ಇಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಉದ್ದೇಶದ ನಾಮ ಮಾತ್ರ ಶಾಲೆ ವಿದ್ಯಾರ್ಥಿಗಳಿಗೆ ಶಾಕ್: 12ನೇ ತರಗತಿ ಪರೀಕ್ಷೆ ಬರೆಯಲು ಅವಕಾಶ ಇಲ್ಲ

ನವದೆಹಲಿ: ನಾಮ ಮಾತ್ರ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳಿಗೆ 12ನೇ ತರಗತಿ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು CBSE ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಂತಹ ಶಾಲೆಗಳಿಗೆ ಪ್ರವೇಶ ಪಡೆದಿದ್ದರೆ ಅದಕ್ಕೆ ವಿದ್ಯಾರ್ಥಿಗಳು ಮತ್ತು ಪೋಷಕರೇ ಹೊಣೆ ಎಂದು CBSE ಸ್ಪಷ್ಟಪಡಿಸಿದೆ. CBSE ಪರೀಕ್ಷೆ ಬರೆಯಲು ಅವಕಾಶ ನೀಡುವ ಏಕೈಕ ಉದ್ದೇಶದಿಂದ ಪ್ರವೇಶ ನೀಡಿ ತರಗತಿಗೆ ಹಾಜರಾಗುವುದರಿಂದ ಸಂಪೂರ್ಣವಾಗಿ ವಿನಾಯಿತಿ ನೀಡುವ ಶಾಲೆಗLu ನಾಮ ಮಾತ್ರದ ಶಾಲೆಗಳಾಗಿವೆ.

ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಸಿದ್ಧತೆ ನಡೆಸುವ ಅನೇಕ ವಿದ್ಯಾರ್ಥಿಗಳು ಇಂತಹ ಶಾಲೆಗಳಲ್ಲಿ ಪ್ರವೇಶ ಪಡೆಯುತ್ತಾರೆ. ಅವರು ಶಾಲೆಗೆ ಹಾಜರಾಗದೆ ತಮ್ಮ ಪೂರ್ಣ ಸಮಯವನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಾರೆ. ಇಂತಹ ಶಾಲೆಗಳು ಅವರಿಗೆ ನೇರವಾಗಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡುತ್ತವೆ. ಇಂತಹ ನಾಮ ಮಾತ್ರದ ಶಾಲೆಗಳ ವಿರುದ್ಧ ಕ್ರಮ ಜರುಗಿಸಲು ಮುಂದಾಗಿರುವ CBSE ಅಂತಹ ಶಾಲೆಗಳು ವಿದ್ಯಾರ್ಥಿಗಳು ಮಂಡಳಿ ನಡೆಸುವ ಪರೀಕ್ಷೆಯಲ್ಲಿ ಹಾಜರಾಗುವುದನ್ನು ತಡೆಯಲು ಪರೀಕ್ಷಾ ಉಪ ನಿಯಮಗಳಿಗೆ ಬದಲಾವಣೆ ತರಲು ಚಿಂತನೆ ನಡೆಸಿದೆ.

ಅಂತಹ ವಿದ್ಯಾರ್ಥಿಗಳು NIPS ಪರೀಕ್ಷೆ ಬರೆಯಬೇಕಿದೆ. 2025- 26ನೇ ಶೈಕ್ಷಣಿಕ ಸಾಲಿನಿಂದ ಈ ನಿರ್ಧಾರ ಜಾರಿಗೆ ಶಿಫಾರಸು ಮಾಡಲಾಗಿದೆ. ಪರೀಕ್ಷೆಗೆ ಹಾಜರಾಗಲು ಶೇಕಡ 75 ರಷ್ಟು ಹಾಜರಾತಿ ಕಡ್ಡಾಯ. ಇಲ್ಲದಿದ್ದರೆ ಅವಕಾಶ ಸಿಗುವುದಿಲ್ಲವೆಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...