ನವದೆಹಲಿ: ದೇಶದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮತ್ತು ವಿದ್ಯಾರ್ಥಿಗಳ ಸುರಕ್ಷತೆಯನ್ನು ಪರಿಗಣಿಸಿ ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಉನ್ನತಮಟ್ಟದ ಸಚಿವರ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಸಿಬಿಎಸ್ಇ 12 ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲು ತೀರ್ಮಾನಿಸಲಾಗಿದೆ. 10 ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಲಾಗಿದ್ದು, ಇದರ ಮುಂದುವರೆದ ಭಾಗವಾಗಿ 12 ನೇ ತರಗತಿ ಪರೀಕ್ಷೆ ಕೂಡ ರದ್ದು ಮಾಡಲು ತೀರ್ಮಾನಿಸಲಾಗಿದೆ.