CBSE 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶದ ಸುದ್ದಿ ಇಲ್ಲಿದೆ ! CBSE ಮಂಡಳಿಯು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಹಲವು ವಿದ್ಯಾರ್ಥಿವೇತನಗಳನ್ನು ನೀಡುತ್ತಿದೆ. ಬೋರ್ಡ್ಸ್ ಮೆರಿಟ್ ಸ್ಕಾಲರ್‌ಶಿಪ್ (BMS) ಅಡಿಯಲ್ಲಿ 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ₹12,000 ನೀಡಲಾಗುವುದು.
ಯಾರು ಅರ್ಹರು?
- ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
- CBSE 10 ಅಥವಾ 12ನೇ ತರಗತಿ ಪರೀಕ್ಷೆಯಲ್ಲಿ ಕನಿಷ್ಠ 85% ಅಂಕ ಗಳಿಸಿರಬೇಕು.
ಇದರ ಜೊತೆಗೆ, CBSE ಏಕ ಹೆಣ್ಣು ಮಗು ವಿದ್ಯಾರ್ಥಿವೇತನವನ್ನೂ ನೀಡುತ್ತಿದೆ. 11 ಮತ್ತು 12ನೇ ತರಗತಿಯಲ್ಲಿ ಓದುತ್ತಿರುವ ಹೆಣ್ಣು ಮಕ್ಕಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. 10ನೇ ತರಗತಿಯಲ್ಲಿ 70% ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ಮತ್ತು ಕುಟುಂಬದ ವಾರ್ಷಿಕ ಆದಾಯ 8 ಲಕ್ಷಕ್ಕಿಂತ ಕಡಿಮೆ ಇರಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ತಿಂಗಳಿಗೆ 500 ರೂ ನೀಡಲಾಗುತ್ತದೆ.
ಕಾಲೇಜು ಮತ್ತು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಕೇಂದ್ರ ವಲಯದ ವಿದ್ಯಾರ್ಥಿವೇತನ ಯೋಜನೆಯಡಿ 12ನೇ ತರಗತಿಯಲ್ಲಿ 80% ಗಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಕುಟುಂಬದ ವಾರ್ಷಿಕ ಆದಾಯ 5 ಲಕ್ಷಕ್ಕಿಂತ ಕಡಿಮೆ ಇರಬೇಕು. ಈ ವಿದ್ಯಾರ್ಥಿವೇತನದಡಿ ಮೂರು ವರ್ಷಗಳ ವರೆಗೆ 12 ಸಾವಿರ ಮತ್ತು ನಂತರ 20 ಸಾವಿರ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ CBSE ಅಧಿಕೃತ ವೆಬ್‌ಸೈಟ್ cbse.gov.in ಗೆ ಭೇಟಿ ನೀಡಿ.