ಬೆಂಗಳೂರು: ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ರಾಜ್ಯ ಸರ್ಕಾರ ವಿಶೇಷ ಯೋಜನೆ ರೂಪಿಸಿದೆ. ಎರಡು ಅಥವಾ ಮೂರು ಪಂಚಾಯಿತಿಗೆ ಒಂದು ನವೋದಯ ಅಥವಾ ದೆಹಲಿ ಮಾದರಿ ಸಿಬಿಎಸ್‌ಇ ಪಠ್ಯಕ್ರಮದ ಸರ್ಕಾರಿ ಶಾಲೆ ಆರಂಭಿಸಲಾಗುವುದು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಸಿಬಿಎಸ್ಇ ಮಾದರಿ ಶಿಕ್ಷಣ ನೀಡಲು ಆಸಕ್ತಿ ವಹಿಸಿದ್ದು, ರಾಜ್ಯದಲ್ಲೇ ಮೊದಲ ಬಾರಿಗೆ ರಾಮನಗರದಲ್ಲಿ ಯೋಜನೆ ಜಾರಿಗೊಳಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಮಾದರಿ ಶಾಲೆ ನಿರ್ಮಾಣಕ್ಕೆ ಸೂಕ್ತ ಸ್ಥಳ ಹುಡುಕುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಯೋಜನೆ ರೂಪಿಸಲಾಗಿದೆ. ಹೋಬಳಿ, ತಾಲೂಕು ಮಟ್ಟ ಹೊರತುಪಡಿಸಿ ಗ್ರಾಮೀಣ ಭಾಗದಲ್ಲಿಯೇ ಮಾದರಿ ಶಾಲೆಗಳನ್ನು ನಿರ್ಮಿಸಲಾಗುತ್ತದೆ. ಸಿಬಿಎಸ್‌ಸಿ ಮಾದರಿ ಶಿಕ್ಷಣ ನೀಡುವುದು ಇದರ ಉದ್ದೇಶವಾಗಿದೆ.