alex Certify 12ನೇ ತರಗತಿ ವಿದ್ಯಾರ್ಥಿಗಳ ಫಲಿತಾಂಶದ ಬಗ್ಗೆ ಮಹತ್ವದ ಹೇಳಿಕೆ ನೀಡಿದ CBSE ಬೋರ್ಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

12ನೇ ತರಗತಿ ವಿದ್ಯಾರ್ಥಿಗಳ ಫಲಿತಾಂಶದ ಬಗ್ಗೆ ಮಹತ್ವದ ಹೇಳಿಕೆ ನೀಡಿದ CBSE ಬೋರ್ಡ್

12ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವನ್ನ ಆಗಸ್ಟ್​ ತಿಂಗಳ ಮಧ್ಯದಲ್ಲಿ ಘೋಷಣೆ ಮಾಡೋದಾಗಿ ಸಿಬಿಎಸ್​ಇ ಬೋರ್ಡ್ ಹೇಳಿದೆ.

ನಿನ್ನೆ ಪ್ರಧಾನಿ ನರೇಂದ್ರ ಮೋದಿ ಕೋವಿಡ್​ 19 ಸಂಕಷ್ಟದಲ್ಲಿ ವಿದ್ಯಾರ್ಥಿಗಳ ಸುರಕ್ಷಿತೆಯನ್ನ ಗಮನದಲ್ಲಿರಿಸಿ ಸಿಬಿಎಸ್​ಇ 12ನೇ ತರಗತಿ ಬೋರ್ಡ್ ಎಕ್ಸಾಂ ರದ್ದು ಘೋಷಣೆ ಮಾಡಿದ ಬೆನ್ನಲ್ಲೇ ಈ ವಿಚಾರ ಹೊರಬಿದ್ದಿದೆ.

ಈ ವಿಚಾರವಾಗಿ ಮಾತನಾಡಿರುವ ಸಿಬಿಎಸ್​ಇ ಬೋರ್ಡ್ ಕಾರ್ಯದರ್ಶಿ ಅನುರಾಗ್​​ ತ್ರಿಪಾಠಿ ವಿದ್ಯಾರ್ಥಿಗಳ ಸುರಕ್ಷತೆಯನ್ನ ಗಮನದಲ್ಲಿರಿಸಿ ಬೋರ್ಡ್ ಪರೀಕ್ಷೆಯನ್ನ ರದ್ದು ಮಾಡಲಾಗಿದೆ. ಈ ಘೋಷಣೆಯನ್ನ ಗಮನದಲ್ಲಿಟ್ಟುಕೊಂಡು ಸಿಬಿಎಸ್​ಇ ಬೋರ್ಡ್​ ವಿದ್ಯಾರ್ಥಿಗಳ ಫಲಿತಾಂಶವನ್ನ ಘೋಷಣೆ ಮಾಡುವ ಮಾನದಂಡಗಳ ಬಗ್ಗೆ ಚರ್ಚೆ ನಡೆಸುತ್ತಿದೆ. ಜುಲೈ ಅಂತ್ಯ ಹಾಗೂ ಆಗಸ್ಟ್​ ಮಧ್ಯದಲ್ಲಿ ಫಲಿತಾಂಶವನ್ನ ಪ್ರಕಟಿಸುತ್ತೇವೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...