ನವದೆಹಲಿ: ದೇಶದಲ್ಲಿ ಕೋವಿಡ್ ಪರಿಸ್ಥಿತಿ ಆಧರಿಸಿ ಮತ್ತು ವಿದ್ಯಾರ್ಥಿಗಳ ಸುರಕ್ಷತೆ ಗಮನದಲ್ಲಿಟ್ಟುಕೊಂಡು ಸಿಬಿಎಸ್ಇ 12 ನೇ ತರಗತಿ ಪರೀಕ್ಷೆ ರದ್ದು ಮಾಡಲು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ವಿದ್ಯಾರ್ಥಿಗಳ ಹಿಂದಿನ ತರಗತಿ, ಪರೀಕ್ಷೆಗಳ ಮಾನದಂಡ ಆಧರಿಸಿ ಫಲಿತಾಂಶ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಗಸ್ಟ್ 12 ರೊಳಗೆ 12ನೇ ತರಗತಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(ಸಿಬಿಎಸ್ಇ) ಬುಧವಾರ ತಿಳಿಸಿದೆ.
ಪ್ರಧಾನಿ 12 ನೇ ತರಗತಿ ಪರೀಕ್ಷೆ ರದ್ದು ಮಾಡುವುದಾಗಿ ಘೋಷಿಸಿದ ಒಂದು ದಿನದ ನಂತರ ಸಿಬಿಎಸ್ಇಯಿಂದ ಈ ಮಾಹಿತಿ ಹೊರಬಿದ್ದಿದೆ. ಸಿಬಿಎಸ್ಇ ಕಾರ್ಯದರ್ಶಿ ಅನುರಾಗ್ ತ್ರಿಪಾಠಿ ಅವರು, ಬಹುನಿರೀಕ್ಷಿತ ಮೌಲ್ಯಮಾಪನ ನೀತಿ ಮತ್ತು ಫಲಿತಾಂಶಕ್ಕೆ ಸಂಬಂಧಿಸಿದಂತೆ ಮಂಡಳಿ ಯೋಜನೆ ರೂಪಿಸಿದೆ. ವಿದ್ಯಾರ್ಥಿಗಳ ಸುರಕ್ಷತೆ ಕಾರಣದಿಂದ ಪರೀಕ್ಷೆ ರದ್ದು ಮಾಡಲಾಗಿದ್ದು, ಮೌಲ್ಯಮಾಪನ ಮತ್ತು ಫಲಿತಾಂಶ ಪ್ರಕಟಕ್ಕೆ ಸ್ವಲ್ಪ ಸಮಯಬೇಕಾಗುತ್ತದೆ. ಜುಲೈ ಅಂತ್ಯ ಇಲ್ಲವೇ ಆಗಸ್ಟ್ ಮಧ್ಯದ ನಡುವೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.