ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(CBSE) 10ನೇ ತರಗತಿ ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಒತ್ತಡ ಕಡಿಮೆ ಮಾಡಲು ಮುಂದಾಗಿದೆ.
ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯದಲ್ಲಿ 2026 -27 ನೇ ಸಾಲಿನಿಂದ 2 ಹಂತದ ಪಠ್ಯದ ವ್ಯವಸ್ಥೆ ಜಾರಿಗೊಳಿಸಲು ಮುಂದಾಗಿದೆ. ಈಗಾಗಲೇ 10ನೇ ತರಗತಿ ವಿದ್ಯಾರ್ಥಿಗಳು ಗಣಿತ ಶಾಸ್ತ್ರ ವಿಷಯದಲ್ಲಿ ಸ್ಟಾಂಡರ್ಡ್ ಅಥವಾ ಮೂಲ ಗಣಿತ ವಿಷಯ ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹೊಸ ವ್ಯವಸ್ಥೆಯಲ್ಲಿ ಮಕ್ಕಳ ಮೇಲಿನ ಶೈಕ್ಷಣಿಕ ಒತ್ತಡ ಕಡಿಮೆಯಾಗಲಿದ್ದು, ಇದರೊಂದಿಗೆ ವಿಭಿನ್ನ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ನೆರವಾಗುತ್ತದೆ ಎಂದು CBSE ಹೇಳಿದೆ.
ಇತ್ತೀಚೆಗೆ ನಡೆದ CBSE ಮಂಡಳಿಯ ಪಠ್ಯಕ್ರಮ ಸಮಿತಿ ಸಭೆಯಲ್ಲಿ ಹೊಸ ವ್ಯವಸ್ಥೆ ಜಾರಿಗೊಳಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಎರಡು ಹಂತದ ವ್ಯವಸ್ಥೆ ಜಾರಿಗೆ ಶಿಫಾರಸು ಮಾಡಿರುವ ಪಠ್ಯಕ್ರಮ ಸಮಿತಿಯ ನಿರ್ಧಾರಕ್ಕೆ ಆಡಳಿತ ಮಂಡಳಿ ಅನುಮತಿ ಸಿಗುವ ನಿರೀಕ್ಷೆ ಇದೆ. ಹೊಸ ಪದ್ದತಿಯು ವಿದ್ಯಾರ್ಥಿಗಳ ವಿಭಿನ್ನ ಕಲಿಕಾ ಆಸಕ್ತಿ ಬೆಳೆಸುವ ಗುರಿ ಹೊಂದಿದೆ ಎಂದು ಹೇಳಲಾಗಿದೆ.