ಬೆಂಗಳೂರು: 570 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಬಿಜೆಪಿಯ ಉಮಾನಾಥ ಕೋಟ್ಯಾನ ಅವರ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಸಚಿವರು ಉತ್ತರ ನೀಡಿದ್ದು, ಸುಗಮ ಆಡಳಿತದ ದೃಷ್ಟಿಯಿಂದ 570 ಪಿಡಿಒಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಪಿಡಿಒಗಳ ಕೊರತೆಯಿಂದಾಗಿ ಸ್ವಲ್ಪ ಸಮಸ್ಯೆ ಎದುರಾಗಿದ್ದು, ಪಿಡಿಒ ನೇಮಕಾತಿಗೆ ಚಾಲನೆ ನೀಡಲಾಗಿದೆ. ಅಭಿವೃದ್ಧಿ ಕಾರ್ಯಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಪಿಡಿಒಗಳು ಕಡಿಮೆ ಸಂಖ್ಯೆಯಲ್ಲಿದ್ದು ಒಬ್ಬೊಬ್ಬರಿಗೆ ಎರಡು ಮೂರು ಪಂಚಾಯಿತಿ ಜವಾಬ್ದಾರಿ ನೀಡಲಾಗಿದೆ. ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ ಎಂದು ಕೋಟ್ಯಾನ್ ಗಮನ ಸೆಳೆದರು. ಈ ವೇಳೆ ಸಚಿವ ಸಿ.ಸಿ. ಪಾಟೀಲ್ ಶೀಘ್ರದಲ್ಲೇ ಪಿಡಿಒ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.