
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲಿಸರು ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ಮುಂದುವರೆಸಿದ್ದು, ಬರೋಬ್ಬರಿ 1.45 ಕೋಟಿ ಮೌಲ್ಯದ ನಿಕೋಟಿನ್ ಜಪ್ತಿ ಮಾಡಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆ, ಮಹದೇವಪುರ, ರಾಮಮೂರ್ತಿ ನಗರಗಳಲ್ಲಿ ಸಂಗ್ರಹಿಸಿಟ್ಟಿದ್ದ ನಿಷೇಧಿತ ಹುಕ್ಕಾ ನಿಕೋಟಿನ್ ಉತ್ಪನ್ನಗಳನ್ನು ವಶಕ್ಕೆ ಪಡೆಯಲಾಗಿದೆ. ದಾಳಿಯಲ್ಲಿ 1.45 ಕೋಟಿ ಮೌಲ್ಯದ ನಿಕೋಟಿನ್ ಜಪ್ತಿ ಮಾಡಲಾಗಿದ್ದು, ಅಕ್ರಮವಾಗಿ ನಿಕೋಟಿನ್ ಮಾರಾಟ ಮಾಡುತ್ತಿದ್ದ 9 ಜನರನ್ನು ಬಂಧಿಸಲಾಗಿದೆ.
ಬಂಧಿತರಿಂದ 1.10 ಲಕ್ಷ ನಗದು, ಟಾಟಾ ಏಸ್, 11 ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದೆ.