ಬೆಂಗಳೂರು : ಉದ್ಯಮಿಗೆ 5 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿ ಅಭಿನವ ಹಾಲಶ್ರಿಯನ್ನು ಸಿಸಿಬಿ ಪೊಲೀಸರು ಬೆಂಗಳೂರಿಗೆ ಕರೆತಂದಿದ್ದಾರೆ.
ಹಾಲಶ್ರೀಯನ್ನು ವಿಮಾನದ ಮೂಲಕ ಒಡಿಶಾದ ಕಟಕ್ ನಿಂದ ಕೆಂಪೇಗೌಡ ಏರ್ ಪೋರ್ಟ್ ಗೆ ಸಿಸಿಬಿ ಪೊಲೀಸರು ಕರೆ ತಂದಿದ್ದು, ನಂತರ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.
ಉದ್ಯಮಿಗೆ 5 ಕೋಟಿ ವಂಚಿಸಿದ ಪ್ರಕರಣದಲ್ಲಿ ಮೂರನೇ ಆರೋಪಿ ಅಭಿನವ ಹಾಲಶ್ರಿಯನ್ನು ಇಂದು ಬೆಳಗ್ಗೆ ಸಿಸಿಬಿ ಪೊಲೀಸರು ಬಂಧಿಸಿದ್ದರು. ಒಡಿಶಾದ ಕಟಕ್ ನಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ಸ್ವಾಮೀಜಿಯನ್ನು ಸಿಸಿಬಿ ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆ ತಂದಿದ್ದಾರೆ. ಸ್ವಾಮೀಜಿ ಸಿಸಿಬಿ ಪೊಲೀಸರ ಖೆಡ್ಡಾಗೆ ಬಿದ್ದಿದ್ದು, ದೊಡ್ಡವರ ಹೆಸರು ಬಹಿರಂಗವಾಗುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ.