alex Certify ವೀಕೆಂಡ್ ಪಾರ್ಟಿ ನೆಪದಲ್ಲಿ ವೇಶ್ಯಾವಾಟಿಕೆ, ಡ್ರಗ್ಸ್ ಸೇರಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದವರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೀಕೆಂಡ್ ಪಾರ್ಟಿ ನೆಪದಲ್ಲಿ ವೇಶ್ಯಾವಾಟಿಕೆ, ಡ್ರಗ್ಸ್ ಸೇರಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದವರು ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯ ವಿವಿಧೆಡೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಹಲವು ಆಫ್ರಿಕನ್ ಪ್ರಜೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ವೇಶ್ಯಾವಾಟಿಕೆ, ಡ್ರಗ್ಸ್ ಸೇವನೆ ಸೇರಿದಂತೆ ಅನೈತಿಕ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ವೀಕೆಂಡ್ ಪಾರ್ಟಿ ಹೆಸರಲ್ಲಿ ವೇಶ್ಯಾವಾಟಿಕೆ. ಮಾದಕ ದಂಧೆ ನಡೆಸಲಾಗುತ್ತಿತ್ತು. ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಶಂಕೆಯ ಮೇಲೆ 25ಕ್ಕೂ ಅಧಿಕ ಶಂಕಿತರನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ.

ಇವರಲ್ಲಿ ಐವರು ವಿದೇಶಿ ಪ್ರಜೆಗಳು ಸೇರಿ ಆರು ಜನ ಮಾದಕ ಪದಾರ್ಥ ಸೇವಿಸಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಗೊತ್ತಾಗಿದೆ. ಇಬ್ಬರು ವಿದೇಶಿ ಪ್ರಜೆಗಳ ವೀಸಾ ಅವಧಿ ಮುಕ್ತಾಯವಾದ ನಂತರವೂ ಅಕ್ರಮವಾಗಿ ಭಾರತದಲ್ಲಿ ನೆಲೆಸಿರುವುದು ಪತ್ತೆಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...