ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು ರೌಡಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಸಿಸಿಬಿ ದಾಳಿ ಒಸಿಡಬ್ಲ್ಯೂ ವಿಭಾಗದ ಅಧಿಕಾರಿಗಳು 40 ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ, ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಕೆಲವು ರೌಡಿಗಳ ಮನೆಯಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿದೆ. ಕುಳ್ಳ ಶಿವರಾಜ್ ಮನೆಯಲ್ಲಿ 10 ಮಚ್ಚು ಲಾಂಗ್ ಪತ್ತೆಯಾಗಿವೆ.
ಸಿಸಿಬಿ ಪೊಲೀಸರು ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದು, ಕೆಲವರ ವಿಚಾರಣೆ ನಡೆಸಿದ್ದಾರೆ. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.