ಬೆಂಗಳೂರು: ಅಕ್ರಮ ಸಿಲಿಂಡರ್ ರೀ ಫಿಲ್ಲಿಂಗ್ ಮಾಡುತ್ತಿದ್ದವರಿಗೆ ಸಿಸಿಬಿ ಬಿಗ್ ಶಾಕ್ ನೀಡಿದ್ದು, ಅಂಗಡಿ, ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಗೃಹ ಬಳಕೆಯ ಸಿಲಿಂಡರ್ ಗಳನ್ನು ಅನಧಿಕೃತವಾಗಿ ದಾಸ್ತಾನು ಮಾಡಿಕೊಂಡು ರೀ ಫಿಲ್ಲಿಂಗ್ ಮಾಡಿ ಮಾರಾಟ ಮಾಡುತ್ತಿದ್ದ ಅಂಗಡಿ, ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಬರೋಬ್ಬರಿ 33 ಲಕ್ಷ ಮೌಲ್ಯದ 290 ಸಿಲಿಂಡರ್ ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.