ಬೆಂಗಳೂರು : ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿ ಸಿಕ್ಕಿಹಾಕಿಕೊಂಡಿದ್ದ ಐವರು ಶಂಕಿತ ಉಗ್ರರನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇನ್ನೊಂದು ಕಡೆ ಸಿಸಿಬಿ ಪೊಲೀಸರ ತನಿಖೆ ಚುರುಕಾಗಿ ಸಾಗುತ್ತಿದೆ. ಇದೀಗ ಶಂಕಿತ ಉಗ್ರರಿಗೆ ಪಿಸ್ತೂಲ್ ಸಪ್ಲೈ ಮಾಡಿದ್ದವನ ಜಾಡನ್ನು ಸಿಸಿಬಿ ಪತ್ತೆ ಹಚ್ಚಿದೆ.
ತುಮಕೂರು ರಸ್ತೆಯ ಟಿ ಬೇಗೂರಿನಲ್ಲಿ ಸಲ್ಮಾನ್ ಎಂಬಾತ ರಬ್ಬಾನಿಗೆ ಪಿಸ್ತೂಲ್ ಸರಬರಾಜು ಮಾಡಿದ್ದಾನೆ ಎಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಸಿಕ್ಕಿದೆ. ಗನ್ ಸಪ್ಲೈ ಮಾಡಿದ ಈ ಹಿಂದೆ ಪೋಕ್ಸೊ ಪ್ರಕರಣದಲ್ಲಿ ಜೈಲು ಸೇರಿದ್ದ ಸಲ್ಮಾನ್ ರಬ್ಬಾನಿಗೆ ಪಿಸ್ತೂಲ್ ಸರಬರಾಜು ಮಾಡಿದ್ದಾನೆ. ಸದ್ಯ ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದು. ನೇಪಾಳ ಮೂಲಕ ದೇಶ ಬಿಟ್ಟು ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದೆ. ತನಿಖೆ ಮುಂದುವರೆಸಿರುವ ಸಿಸಿಬಿ ಸಲ್ಮಾನ್ ಪಾಸ್ ಪೋರ್ಟ್ , ಕಾಲ್ ಡಿಟೇಲ್ಸ್ ಮಾಹಿತಿ ಪಡೆದು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.
ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಬೆಂಗಳೂರಿನ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ 7 ಶಂಕಿತ ಉಗ್ರರ ಪೈಕಿ ಐವರನ್ನು ಬಂಧಿಸಿದ್ದು, ಇಬ್ಬರು ಪರಾರಿಯಾಗಿದ್ದಾರೆ. ಆರೋಪಿ ನಂಬರ್-1 ನಜೀರ್ ಹಾಗೂ ಆರೋಪಿ ನಂಬರ್ 2 ಸದ್ಯ ಪರಾರಿಯಾಗಿದ್ದು, 3 ಸುಹೇಲ್, 4 ಉಮರ್, 5, ಜಾಹೀದ್, 6 ಮುದಾಸಿರ್, ಫೈಜಲ್ ಆರೆಸ್ಟ್ ಆಗಿದ್ದಾರೆ.
ಜನಸಂಖ್ಯೆ ಹೆಚ್ಚಿರುವ ಬಸ್ ನಿಲ್ದಾಣ ಹಾಗೂ ಹೋಟೆಲ್ ಗಳಲ್ಲಿ ಬಾಂಬ್ ಸ್ಪೋಟಿಸಲು ಉಗ್ರರು ಸ್ಕೆಚ್ ಹಾಕಿದ್ದರು. ಬಂಧಿತ ಐವರು ಆರೋಪಿಗಳು 2017 ರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಅವರನ್ನು ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು, ಅಲ್ಲಿ ಅವರು ಕೆಲವು ಭಯೋತ್ಪಾದಕರೊಂದಿಗೆ ಸಂಪರ್ಕಕ್ಕೆ ಬಂದರು ಮತ್ತು ಸ್ಫೋಟಕಗಳನ್ನು ನಿರ್ವಹಿಸುವ ಬಗ್ಗೆ ತರಬೇತಿ ಪಡೆದಿದ್ದರು ಎನ್ನಲಾಗಿದೆ.