ನಾಸಿಕ್: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರೊಬ್ಬರು ಬೆತ್ತಲೆಯಾಗಿ ಸುತ್ತಾಡುತ್ತಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. ಈ ಕೃತ್ಯ ನಡೆದಾಗ ವೈದ್ಯ ಕುಡಿದ ಅಮಲಿನಲ್ಲಿದ್ದ.
ಸ್ಥಳೀಯ ನಿವಾಸಿಗಳ ಪ್ರಕಾರ, ವೈದ್ಯ ಮಾದಕ ವ್ಯಸನಿಯಾಗಿದ್ದು, ಬಿಡ್ಕಿನ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಸಿಸಿಟಿವಿ ದೃಶ್ಯಾವಳಿಗಳಲ್ಲಿ, ವೈದ್ಯನ ದೇಹದ ಮೇಲೆ ಯಾವುದೇ ಬಟ್ಟೆಯಿಲ್ಲದೆ ಬೆತ್ತಲೆಯಾಗಿ ಆಸ್ಪತ್ರೆಯ ಆವರಣದಲ್ಲಿ ನಡೆದಾಡುತ್ತಿರುವುದು ಕಂಡುಬಂದಿದೆ. ಅವನು ಶೌಚಾಲಯದ ಒಳಗೆ ಹೋಗುವ ಮೊದಲು ಕಾರಿಡಾರ್ನಲ್ಲಿ ಬಟ್ಟೆಯನ್ನು ಬೀಸುವುದನ್ನು ಸಹ ಕಾಣಬಹುದು.
ವಿಲಕ್ಷಣ ಘಟನೆಯ ಕುರಿತು ಪ್ರತಿಕ್ರಿಯಿಸಿದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಆರೋಗ್ಯ ಸೇವೆಗಳ ಮುಖ್ಯಸ್ಥ ಡಾ. ದಯಾನಂದ ಮೋತಿಪಾವ್ಲೆ, ಈ ಬಗ್ಗೆ ತನಿಖೆ ನಡೆಸಲಾಗಿದ್ದು, ವೈದ್ಯನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ವೈದ್ಯಕೀಯ ಅಧೀಕ್ಷಕರಿಗೆ ವರದಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.