ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಅಧಿಕಾರಿಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಪೊಲೀಸ್ ಅಧಿಕಾರಿಗಳ ವಿರುದ್ಧದ ಕೇಸ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ. ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್, ಡಿಸಿಪಿ ಅನುಚೆತ್ ಮತ್ತು ಇನ್ಸ್ ಪೆಕ್ಟರ್ ಮಾರುತಿ ಅವರ ವಿರುದ್ಧದ ತನಿಖೆ ರದ್ದು ಮಾಡಲಾಗಿದೆ. ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಇವರು ಸೂಕ್ತ ತನಿಖೆ ನಡೆಸಿಲ್ಲ ಎಂದು ಆರೋಪಿಸಿ ಆದರ್ಶ್ ಅಯ್ಯರ್ ಎಂಬವರು ಖಾಸಗಿ ದೂರು ಸಲ್ಲಿಸಿದ್ದರು.
ಸಿಡಿ ಪ್ರಕರಣದ ತನಿಖೆ ಮುಕ್ತಾಯವಾಗಿದ್ದು, ಕಾನೂನು ಪ್ರಕಾರ ತನಿಖೆ ನಡೆದಿದೆ. ಅಂತಿಮ ವರದಿ ಸಲ್ಲಿಕೆಗೆ ಅನುಮತಿ ಕೋರಲಾಗಿದೆ. ಹೈಕೋರ್ಟ್ ಗೆ ಅರ್ಜಿ ಕೂಡ ಸಲ್ಲಿಸಲಾಗಿದೆ ಎಂದು ಎಸ್ಐಟಿ ಪರ ವಕೀಲರಾದ ಪ್ರಸನ್ನಕುಮಾರ್ ವಾದ ಮಂಡಿಸಿದರು. ಪೊಲೀಸ್ ಅಧಿಕಾರಿಗಳ ವಿರುದ್ಧದ ತನಿಖೆಗೆ ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದ್ದು, ಅಧಿಕಾರಿಗಳಿಗೆ ಸಂಕಷ್ಟ ಎದುರಾಗಿತ್ತು. ಎಸಿಎಂಎಂ ಕೋರ್ಟ್ ಆದೇಶವನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದು, ಹೈಕೋರ್ಟ್ ಏಕಸದಸ್ಯ ಪೀಠ ಪೊಲೀಸ್ ಅಧಿಕಾರಿಗಳ ವಿರುದ್ಧದ ತನಿಖೆ ರದ್ದುಗೊಳಿಸಿದೆ ಎಂದು ಹೇಳಲಾಗಿದೆ.