ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ರಮೇಶ್ ಜಾರಕಿಹೊಳಿ ಪಟ್ಟುಹಿಡಿದಿದ್ದಾರೆ.
ಆಪ್ತರ ಜೊತೆಗೆ ಅವರು ದೆಹಲಿಗೆ ತೆರಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಗೆ ಸಮಯ ಕೇಳಿದ್ದಾರೆ. ಅಮಿತ್ ಶಾ ಅವರನ್ನು ಭೇಟಿಯಾಗಿ ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಮನವಿ ಮಾಡಲಿದ್ದಾರೆ.
ಸಿಡಿ ಪ್ರಕರಣದ ತನಿಖೆ ಸಿಬಿಐಗೆ ವಹಿಸುವ ಬಗ್ಗೆ ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವ ರಮೇಶ್ ಜಾರಕಿಹೊಳಿ ಇಂದು ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.