ರಮೇಶ್ ಜಾರಕಿಹೊಳಿ ವಿರುದ್ಧ ಯುವತಿ ಮತ್ತೆ ಸಿಡಿದೆದ್ದಿದ್ದಾರೆ. ಕಮಿಷನರ್ ಹೆಸರು ಉಲ್ಲೇಖಿಸಿ ಸಿಡಿ ಯುವತಿ ಪತ್ರ ಬರೆದಿದ್ದಾರೆ.
ಆರೋಪಿಯನ್ನು ರಕ್ಷಿಸುವುದಕ್ಕಾಗಿ ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂದು ಯುವತಿ ಆರೋಪ ಮಾಡಿದ್ದಾರೆ. ಸಂತ್ರಸ್ತ ಯುವತಿಯಿಂದ ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ದೂರು ನೀಡಲಾಗಿದೆ.
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ದೂರು ನೀಡಲಾಗಿದ್ದು, ಆರೋಪಿಯನ್ನು ಕೇವಲ ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ. ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಹೇಳಿ ವಾಪಸ್ ಕಳಿಸಿದ್ದು ಅವರು ಮುಕ್ತವಾಗಿ ಓಡಾಡಲು ಎಸ್ಐಟಿ ಅವಕಾಶ ನೀಡಿದೆ. ಆದರೆ, ನನಗೆ ಒಂದು ದಿನವೂ ಬಿಡದೆ ವಿಚಾರಣೆ ನಡೆಸಲಾಗಿದೆ ಎಂದು ಯುವತಿ ದೂರು ನೀಡಿದ್ದಾರೆನ್ನಲಾಗಿದೆ.