
ಬೆಂಗಳೂರು: ನಮ್ಮ ಮಗಳು ಒತ್ತಡ ಮತ್ತು ಪ್ರಭಾವಕ್ಕೆ ಒಳಗಾಗಿ ಹೇಳಿಕೆ ನೀಡಿದ್ದು, ಆಕೆ ನೀಡಿರುವ ಹೇಳಿಕೆಯನ್ನು ರದ್ದು ಮಾಡಬೇಕೆಂದು ಕೋರಿ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಯುವತಿಯ ತಂದೆ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಈ ಬೆಳವಣಿಗೆಯಿಂದಾಗಿ ಸಂತ್ರಸ್ತ ಯುವತಿಯ ಹೇಳಿಕೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿರುವ ಯುವತಿಯ ತಂದೆ, ಸೆಕ್ಷನ್ 164 ಅಡಿ ದಾಖಲಾದ ಹೇಳಿಕೆಯನ್ನು ಪರಿಗಣಿಸಬಾರದು ಎಂದು ಮನವಿ ಮಾಡಿದ್ದಾರೆ.
ನಮ್ಮ ಅಥವಾ ನ್ಯಾಯಾಂಗದ ಸುಪರ್ದಿಯಲ್ಲಿ ಮಗಳನ್ನು ಏಕಾಂತದಲ್ಲಿ ಇರಿಸಬೇಕು. ಕೋರ್ಟ್ ಸೂಚಿಸಿದ ಸ್ವತಂತ್ರ ಸಂಸ್ಥೆಯ ಸುಪರ್ದಿಯಲ್ಲಿ ಇರಿಸಬೇಕು. ಆ ನಂತರವಷ್ಟೇ ನನ್ನ ಮಗಳು ಸ್ವತಂತ್ರವಾಗಿ ಹೇಳಿಕೆ ನೀಡಲು ಸಾಧ್ಯ ಎಂದು ಹೇಳಿದ್ದಾರೆ.
ನಾಟಕೀಯ ಬೆಳವಣಿಗೆಯಲ್ಲಿ ನಮ್ಮ ಪುತ್ರಿಯ ಹೇಳಿಕೆ ದಾಖಲಿಸಲಾಗಿದೆ. ನಮ್ಮ ಮಗಳು ಯಾವುದೇ ಒತ್ತಡಕ್ಕೆ ಒಳಗಾಗಿರುವ ಶಂಕೆಯಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಒತ್ತಡಕ್ಕೆ ಒಳಗಾಗಿ ನೀಡಿದ ಹೇಳಿಕೆಯನ್ನು ಪರಿಗಣಿಸಬಾರದು. ಆಕೆ ದಾಖಲಿಸಿದ ಹೇಳಿಕೆಯನ್ನು ರದ್ದುಗೊಳಿಸಬೇಕು ಎಂದು ಹೈಕೋರ್ಟ್ ಗೆ ರಿಟ್ ಅರ್ಜಿಯ ಮೂಲಕ ಸಿಡಿ ಯುವತಿಯ ತಂದೆ ಮನವಿ ಮಾಡಿದ್ದಾರೆ.