ಬೆಂಗಳೂರು: ನಾನು ಈ ಹಿಂದೆ ನೀಡಿದ್ದ ಹೇಳಿಕೆಗೆ ಬದ್ದಳಾಗಿದ್ದೇನೆ ಎಂದು ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಯುವತಿ ಹೇಳಿಕೆ ನೀಡಿದ್ದಾರೆ.
ಇದರೊಂದಿಗೆ ಸಿಡಿ ಕೇಸ್ ಗೆ ಸಂಬಂಧಿಸಿದಂತೆ ಮತ್ತೊಂದು ಮೇಜರ್ ಟ್ವಿಸ್ಟ್ ಸಿಕ್ಕಿದೆ. ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಎಸ್ಐಟಿ ಅಧಿಕಾರಿಗಳ ಮುಂದೆ ನಾನು ಉಲ್ಟಾ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾನು ಈ ಹಿಂದೆ ನೀಡಿದ್ದ ಹೇಳಿಕೆಗೆ ಬದ್ದಳಾಗಿದ್ದೇನೆ ಎಂದು ತಿಳಿಸಿದ್ದಾರೆ. ಎಸ್ಐಟಿ ಎದುರು ಯುವತಿ ಹೇಳಿಕೆ ಬದಲಿಸಿದ್ದಾಳೆ ಎಂದು ಹೇಳಲಾಗಿದ್ದು, ಅದನ್ನು ಅಲ್ಲಗಳೆದ ಅವರು ಮೊದಲು ನೀಡಿದ್ದ ಹೇಳಿಕೆಗೆ ಬದ್ಧವಾಗಿರುವುದಾಗಿ ಸ್ಪಷ್ಟಪಡಿಸಿದ್ದಾರೆ.