alex Certify BIG NEWS: ರಾಸಲೀಲೆ ಸಿಡಿ ರಹಸ್ಯ ಬಿಚ್ಚಿಟ್ಟ ಮಾಜಿ ಸಚಿವ: ಎಷ್ಟೇ ಖರ್ಚಾಗಲಿ ಏನೇ ಆಗ್ಲಿ ಸುಮ್ನೆ ಬಿಡಲ್ಲ ಎಂದ್ರು ರಮೇಶ ಜಾರಕಿಹೊಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಸಲೀಲೆ ಸಿಡಿ ರಹಸ್ಯ ಬಿಚ್ಚಿಟ್ಟ ಮಾಜಿ ಸಚಿವ: ಎಷ್ಟೇ ಖರ್ಚಾಗಲಿ ಏನೇ ಆಗ್ಲಿ ಸುಮ್ನೆ ಬಿಡಲ್ಲ ಎಂದ್ರು ರಮೇಶ ಜಾರಕಿಹೊಳಿ

ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ದೊಡ್ಡ ಷಡ್ಯಂತ್ರ ಮಾಡಿದ್ದಾರೆ. ರಾಸಲೀಲೆ ಸಿಡಿ ಮಾಡಲು ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿದ್ದಾರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದೇಶದಲ್ಲಿ ಎರಡು ಫ್ಲ್ಯಾಟ್ ಗಳನ್ನು ಯುವತಿಗೆ ಕೊಡಿಸಿದ್ದು, 5 ಕೋಟಿ ರೂಪಾಯಿ ನೀಡಲಾಗಿದೆ. ಆದರೆ ಇದು ಖಚಿತವಲ್ಲ, ಮಾಹಿತಿ ಬಂದಿದೆ ಎಂದು ತಿಳಿಸಿದ್ದಾರೆ.

ಯಶವಂತಪುರದ ಕಟ್ಟಡದಲ್ಲಿ ಷಡ್ಯಂತ್ರ ನಡೆದಿದೆ. ಒರಾಯನ್ ಮಾಲ್ ಅಕ್ಕಪಕ್ಕ 5 ನೇ ಮಹಡಿಯಲ್ಲಿ ಷಡ್ಯಂತ್ರ ನಡೆದಿದೆ. ಪ್ರಕರಣದ ಬಗ್ಗೆ ಕಾನೂನು ಹೋರಾಟ ನಡೆಸುತ್ತೇನೆ. ನನಗೆ ರಾಜಕಾರಣಕ್ಕಿಂತ ಕುಟುಂಬದ ಮರ್ಯಾದೆ ಮುಖ್ಯ. ನನ್ನ ರಾಜಕೀಯ ಬೆಳವಣಿಗೆ ಸಹಿಸದೆ ಇಂತಹ ಕೃತ್ಯವೆಸಗಿದ್ದಾರೆ ಎಂದು ಗುಡುಗಿದ್ದಾರೆ.

ಈ ಪ್ರಕರಣದ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ನೀಡುತ್ತೇನೆ. ಯಾರು ಎಷ್ಟು ದೊಡ್ಡವರಾಗಿದ್ದರೂ ಸುಮ್ಮನೆ ಬಿಡಲ್ಲ. ಎಷ್ಟೇ ಖರ್ಚಾಗಲಿ, ಏನೇ ಆಗಲಿ. ಎಷ್ಟೇ ಪ್ರಭಾವಿಗಳಾಗಿರಲಿ ಸುಮ್ಮನೆ ಬಿಡಲ್ಲ. ಅವರನ್ನು ಜೈಲಿಗೆ ಕಳುಹಿಸುತ್ತೇವೆ. ನಮಗೆ ಕುಟುಂಬದ ಗೌರವ ಮುಖ್ಯ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...