alex Certify BIG BREAKING: ಕೊನೆಗೂ ರಹಸ್ಯ ಬಿಚ್ಚಿಟ್ಟ ‘ಸಿಡಿ’ಯಲ್ಲಿದ್ದ ಯುವತಿ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊನೆಗೂ ರಹಸ್ಯ ಬಿಚ್ಚಿಟ್ಟ ‘ಸಿಡಿ’ಯಲ್ಲಿದ್ದ ಯುವತಿ…?

ನನಗೆ ಯಾವುದೇ ರಾಜಕೀಯ ನಾಯಕರ ಬೆಂಬಲವಿಲ್ಲ ಎಂದು ರಮೇಶ ಜಾರಕಿಹೊಳಿ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಯುವತಿ ಹೇಳಿಕೆ ಬಿಡುಗಡೆ ಮಾಡಿದ್ದಾಳೆನ್ನಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹೇಳಿಕೆಯನ್ನು ಬಿಡುಗಡೆ ಮಾಡಲಾಗಿದೆ ಎನ್ನಲಾಗಿದ್ದು, ನನಗೆ ಯಾವುದೇ ರಾಜಕೀಯ ನಾಯಕರ ಬೆಂಬಲವಿಲ್ಲ. ರಮೇಶ ಜಾರಕಿಹೊಳಿ ಅವರೇ ಸಿಡಿ ರಿಲೀಸ್ ಮಾಡಿದ್ದಾರೆ. ಈ ವಿಡಿಯೋದಿಂದಾಗಿ ನನ್ನ ಮಾನ ಹರಾಜು ಆಗಿದೆ. ಇದರಿಂದ ನನ್ನ ತಂದೆ-ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾನು ಕೂಡ ಎರಡು ಸಲ ಆತ್ಮಹತ್ಯೆಗೆ ಯತ್ನಿಸಿದ್ದೇನೆ ಎಂದು ಹೇಳಿಕೊಂಡಿದ್ದಾಳೆನ್ನಲಾಗಿದೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡುತ್ತೇನೆ. ನನಗೆ, ನನ್ನ ಕುಟುಂಬಸ್ಥರಿಗೆ ರಕ್ಷಣೆ ನೀಡುವಂತೆ ಮನವಿ ಮಾಡುತ್ತೇನೆ. ನನಗೆ ಕೆಲಸ ಕೊಡಿಸುವುದಾಗಿ ರಮೇಶ್ ಜಾರಕಿಹೊಳಿ ವಂಚಿಸಿದ್ದಾರೆ ಎಂದು ಯುವತಿ ಹೇಳಿಕೆ ಬಿಡುಗಡೆ ಮಾಡಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...