alex Certify BIG NEWS: ತನಿಖೆಯಲ್ಲಿ ಬಯಲಾಯ್ತು ಸಿಡಿಎಸ್ ರಾವತ್ ಹೆಲಿಕಾಪ್ಟರ್ ದುರಂತದ ರಹಸ್ಯ: ಶೀಘ್ರವೇ ತನಿಖಾ ವರದಿ ಸಲ್ಲಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತನಿಖೆಯಲ್ಲಿ ಬಯಲಾಯ್ತು ಸಿಡಿಎಸ್ ರಾವತ್ ಹೆಲಿಕಾಪ್ಟರ್ ದುರಂತದ ರಹಸ್ಯ: ಶೀಘ್ರವೇ ತನಿಖಾ ವರದಿ ಸಲ್ಲಿಕೆ

ನವದೆಹಲಿ: ಸಿಡಿಎಸ್‌ ಜನರಲ್‌ ಬಿಪಿನ್‌ ರಾವತ್‌ ಮತ್ತು ಸೇನಾಧಿಕಾರಿಗಳು ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ದುರಂತದ ತನಿಖೆಗಾಗಿ ರಚಿಸಲಾಗಿರುವ ತನಿಖಾ ಸಮಿತಿ ತನ್ನ ವರದಿಯನ್ನು ಶೀಘ್ರದಲ್ಲೇ ಸರ್ಕಾರಕ್ಕೆ ಸಲ್ಲಿಸುವ ಸಾಧ್ಯತೆಯಿದೆ.

ಹೆಲಿಕಾಪ್ಟರ್ ಪತನಕ್ಕೆ ಕಾರಣ ತಿಳಿಯಲು ರಕ್ಷಣಾ ಸಚಿವಾಲಯ ತ್ರಿಸೇವಾ ತನಿಖೆಗೆ ಆದೇಶಿಸಿತ್ತು. ಭಾರತೀಯ ವಾಯುಪಡೆಯ ತರಬೇತಿ ವಿಭಾಗದ ಕಮಾಂಡಿಂಗ್-ಇನ್-ಚೀಫ್ ಏರ್ ಮಾರ್ಷಲ್ ಮಾನವೇಂದ್ರ ಸಿಂಗ್ ಅವರ ನೇತೃತ್ವದಲ್ಲಿ ತನಿಖೆ, ವಿಚಾರಣೆ ನಡೆಸಲಾಗಿದೆ.

ಸಿಡಿಎಸ್ ಜನರಲ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಇತರ 12 ಸಶಸ್ತ್ರ ಪಡೆಗಳ ಅಧಿಕಾರಿಗಳ ಸಾವಿನ ನಂತರ, IAF ನ Mi-17V5 ಪತನದ ಕಾರಣಕ್ಕೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳಿವೆ. ಈ ಕಾರಣಕ್ಕಾಗಿಯೇ ಅಪಘಾತದ ಕಾರಣವನ್ನು ತನಿಖೆ ಮಾಡಲು ನ್ಯಾಯಾಲಯದ ವಿಚಾರಣೆ ಸ್ಥಾಪಿಸಲಾಗಿದೆ.

ತನಿಖಾ ಸಮಿತಿಯು ಸೇನೆ ಮತ್ತು ಐಎಎಫ್ ಸಿಬ್ಬಂದಿಯ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ. ಅಪಘಾತದ ಸ್ಥಳದ ಬಳಿ ಇದ್ದ ಸ್ಥಳೀಯರೊಂದಿಗೂ ಮಾತುಕತೆ ನಡೆಸಿ ಮಾಹಿತಿ ಪಡೆಯಲಾಗಿದೆ. ಅಪಘಾತಕ್ಕೂ ಮುನ್ನ ಹೆಲಿಕಾಪ್ಟರ್‌ ವಿಡಿಯೋ ರೆಕಾರ್ಡ್ ಆಗಿದ್ದ ಮೊಬೈಲ್ ಫೋನ್ ಅನ್ನು ಕೂಡ ಪರಿಶೀಲಿಸಲಾಗಿದೆ.

ಎಫ್‌ಡಿಆರ್ ಅಂದರೆ ಬ್ಲ್ಯಾಕ್ ಬಾಕ್ಸ್ ಎಂದು ಸಾಮಾನ್ಯವಾಗಿ ಕರೆಯಲ್ಪಡುವ ಫ್ಲೈಟ್ ಡೇಟಾ ರೆಕಾರ್ಡ್ ಮಾಡಲಾಗಿದ್ದು, ಮಾಹಿತಿಯನ್ನು ವರದಿಯಲ್ಲಿ ಸೇರಿಸಲಾಗಿದೆ.

ಏರ್ ಸ್ಟಾಫ್ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್. ಚೌಧರಿ ಅವರು ಪ್ರಸ್ತುತ ದಕ್ಷಿಣ ಕೊರಿಯಾಕ್ಕೆ ನಾಲ್ಕು ದಿನಗಳ ಭೇಟಿ ನೀಡಿ ಆಗಮಿಸಲಿದ್ದಾರೆ. ಅವರು ಮರಳಿ ಬಂದ ನಂತರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು.

CDS ಜನರಲ್ ಬಿಪಿನ್ ರಾವತ್ ಅವರು ಡಿಸೆಂಬರ್ 8 ರಂದು Mi-17V5 ಹೆಲಿಕಾಪ್ಟರ್ ನಲ್ಲಿದ್ದರು, ಅದು ಸೂಲೂರ್ ವಾಯುನೆಲೆಯಿಂದ ಟೇಕ್ ಆಫ್ ಆಗಿದ್ದು, ವೆಲ್ಲಿಂಗ್ಟನ್‌ನಲ್ಲಿರುವ ಡಿಫೆನ್ಸ್ ಸರ್ವಿಸ್ ಸ್ಟಾಫ್ ಕಾಲೇಜ್ ಕಡೆಗೆ ಹೊರಟಿತ್ತು.

ಹೆಲಿಕಾಪ್ಟರ್ ಕೂನೂರು ಪ್ರದೇಶದಲ್ಲಿ ಇಳಿಯುವ ಕೆಲವೇ ನಿಮಿಷಗಳ ಮೊದಲು ಪತನಗೊಂಡಿದ್ದು, ಜನರಲ್ ರಾವತ್, ಅವರ ಪತ್ನಿ ಮತ್ತು ಇತರ 12 ಸೇನಾ ಸಿಬ್ಬಂದಿಯನ್ನು ಬಲಿ ತೆಗೆದುಕೊಂಡಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...