ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ ಮುಂಬರುವ ಚುನಾವಣೆಗಳ ಬಗ್ಗೆ ಮಾಹಿತಿ ನೀಡಿದರು.
2024 ರ ಸಂಸದೀಯ ಚುನಾವಣೆ ಮತ್ತು ರಾಜ್ಯ ವಿಧಾನಸಭಾ ಚುನಾವಣೆಗಳನ್ನು (ಒಡಿಶಾ) ನಡೆಸಲು ನಾವು ಸಂಪೂರ್ಣವಾಗಿ ಸಿದ್ಧರಾಗಿದ್ದೇವೆ. ಎಲ್ಲಾ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ ಎಂದು ಅವರು ಹೇಳಿದರು.
50 ರಷ್ಟು ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಸೌಲಭ್ಯ ಲಭ್ಯವಿರುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ. 37,809 ಮತಗಟ್ಟೆಗಳ ಪೈಕಿ 22,685 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ವಿಕಲಚೇತನರು, ಯುವಕರು ಮತ್ತು ಮಹಿಳೆಯರ ಮೇಲೆ ಹೆಚ್ಚಿನ ಗಮನ ಹರಿಸಲಾಗುವುದು, ಇದಕ್ಕಾಗಿ 300 ಮತಗಟ್ಟೆಗಳು ಇರಲಿದ್ದು, ಅವುಗಳನ್ನು ವಿಕಲಚೇತನರು ನಿರ್ವಹಿಸಲಿದ್ದಾರೆ ತಿಳಿಸಿದ್ದಾರೆ.