ನವದೆಹಲಿ: ಮನೆಯೊಳಗೆ ಹಬ್ಬ ಆಚರಿಸಿ, ಸಾರ್ವಜನಿಕವಾಗಿ ಹಬ್ಬ ಆಚರಣೆ ಮಾಡದಿರಿ ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ.
ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ಆದರೆ, ಎರಡನೆಯ ಇನ್ನೂ ಸಂಪೂರ್ಣವಾಗಿ ಮುಗಿದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ನೀತಿ ಆಯೋಗದ ಸದಸ್ಯ ಹಾಗೂ ಕೋವಿಡ್ ಕಾರ್ಯಪಡೆಯ ಮುಖ್ಯಸ್ಥ ಡಾ.ವಿ.ಕೆ. ಪೌಲ್ ಅವರು, ಜನರು ಗುಂಪು ಸೇರುವುದರಿಂದ, ಸಾರ್ವಜನಿಕವಾಗಿ ಗಣೇಶ ಚತುರ್ಥಿ, ದೀಪಾವಳಿ, ಈದ್ ಮೊದಲಾದ ಹಬ್ಬ ಆಚರಿಸುವುದರಿಂದ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಿ ಮನೆಯೊಳಗೆ ಹಬ್ಬ ಆಚರಿಸಬೇಕು ಎಂದು ಮನವಿ ಮಾಡಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸುವುದು, ಅಂತರ ಪಾಲನೆ ಮುಖ್ಯವಾಗಿದೆ. ಕೊರೋನಾ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಕೊರೋನಾ ಎರಡನೇ ಅಲೆ ಇನ್ನೂ ಮುಗಿದಿಲ್ಲ. ಎಲ್ಲರೂ ಮನೆಯೊಳಗೆ ಹಬ್ಬ ಆಚರಿಸಬೇಕು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಪ್ರಧಾನ ನಿರ್ದೇಶಕ ಬಲರಾಮ್ ಭಾರ್ಗವ್ ತಿಳಿಸಿದ್ದಾರೆ.