alex Certify ‘ರಾಜಾಹುಲಿ’ ಸಿನಿಮಾಗೆ 10 ವರ್ಷದ ಸಂಭ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರಾಜಾಹುಲಿ’ ಸಿನಿಮಾಗೆ 10 ವರ್ಷದ ಸಂಭ್ರಮ

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ರಾಜಾಹುಲಿ’ ಸಿನಿಮಾ 2013 ನವೆಂಬರ್ 1ರಂದು ರಾಜ್ಯದಾದ್ಯಂತ ತೆರೆಕಂಡಿತ್ತು. ಈ ಚಿತ್ರ ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿತ್ತು. ಬಿಡುಗಡೆಯಾಗಿ ಇಂದಿಗೆ ಹತ್ತು ವರ್ಷಗಳಾಗಿದ್ದು, ಈ ಸಂತಸವನ್ನು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

ಗುರು ದೇಶಪಾಂಡೆ ನಿರ್ದೇಶನದ ಈ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಮೇಘನಾ ರಾಜ್, ವಸಿಷ್ಠ, ಚಿಕ್ಕಣ್ಣ, ಚರಣ್ ರಾಜ್, ಮಿತ್ರ, ಶಶಿಕಲಾ, ಸುಧಾ ಬೆಳವಾಡಿ, ಸೌಜನ್ಯ, ಅರುಣಾ ಬಾಲ್ರಾಜ್, ಅಶ್ವಿನಿ ಸೇರಿದಂತೆ ಮೊದಲಾದ ಕಲಾವಿದರು ಬಣ್ಣ ಹಚ್ಚಿದ್ದಾರೆ.

ಲಕ್ಷ್ಮಿ ಶ್ರೀ ಕಂಬೈನ್ಡ್ ಬ್ಯಾನರ್ ನಡಿ ಕೆ. ಮಂಜು ನಿರ್ಮಾಣ ಮಾಡಿದ್ದಾರೆ. ಕೆ ಎಂ ಪ್ರಕಾಶ್ ಅವರ ಸಂಕಲನ ಹಾಗೂ ನಾದಬ್ರಹ್ಮ ಹಂಸಲೇಖ ಸಂಗೀತ ಸಂಯೋಜನೆ ನೀಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...