
ಬೆಂಗಳೂರು: ಬಸವರಾಜ ಬೊಮ್ಮಾಯಿ ಬೆಂಬಲಿಗರಿಂದ ಸಂಭ್ರಮಾಚರಣೆ ನಡೆಸಲಾಗಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದು, ಕೆಲವೇ ಕ್ಷಣಗಳಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ.
ಈಗಾಗಲೇ ಬಸವರಾಜ ಬೊಮ್ಮಾಯಿ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದ್ದಾರೆ. ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆಯಾಗುವುದು ಖಚಿತವಾಗುತ್ತಿದ್ದಂತೆ ಅವರ ನಿವಾಸದಲ್ಲಿ ಸಂಭ್ರಮಾಚರಣೆ ನಡೆಸಲಾಗಿದೆ. ಹುಬ್ಬಳ್ಳಿಯಲ್ಲಿಯೂ ಬೊಮ್ಮಾಯಿ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದ್ದಾರೆ.
ಬಸವರಾಜ್ ಬೊಮ್ಮಾಯಿ ಅಧಿಕೃತ ಘೋಷಣೆಯೊಂದೇ ಬಾಕಿ ಇದ್ದು, ಬೆಂಗಳೂರು, ಹುಬ್ಬಳ್ಳಿ, ಶಿಗ್ಗಾಂವಿ ಸೇರಿದಂತೆ ಹಲವೆಡೆ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದ್ದಾರೆ.