
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರನ್ನು ಬಿಜೆಪಿ ಶಾಸಕಾಂಗ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ವರಿಷ್ಠರಿಂದ ಬಂದ ಸಂದೇಶವನ್ನು ವೀಕ್ಷಕರು ಸಭೆಗೆ ತಿಳಿಸಿದ್ದಾರೆ.
ನೂತನ ಮುಖ್ಯಮಂತ್ರಿಯಾದ ಬಸವರಾಜ ಬೊಮ್ಮಾಯಿ ಅವರ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದ್ದು, ಬಿಜೆಪಿ ಶಾಸಕರೆಲ್ಲರೂ ಹೊಸ ಸಿಎಂ ಬೊಮ್ಮಾಯಿ ಅವರನ್ನು ಅಭಿನಂದಿಸಿದ್ದಾರೆ. ಬಸವರಾಜ್ ಬೊಮ್ಮಾಯಿ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗುತ್ತಿದ್ದಂತೆ ಅವರ ಬೆಂಬಲಿಗರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ.