ಬೆಂಗಳೂರು : ಜೂ.27 ರಂದು ‘ಕೆಂಪೇಗೌಡ ಜಯಂತಿ’ ಆಚರಣೆ ಮಾಡಲಾಗುತ್ತಿದ್ದು, ರಾಜ್ಯದ ಪ್ರತಿ ತಾಲೂಕಿಗೆ 1 ಲಕ್ಷ ಹಣ ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿದೆ.
ರಾಜ್ಯಾದ್ಯಂತ ಜೂನ್ 27ರಂದು ಕೆಂಪೇಗೌಡರ ಜಯಂತಿ ಆಚರಿಸಲಾಗುವುದು. ರಾಜ್ಯದ ಎಲ್ಲ ತಾಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು ತಲಾ ₹1 ಲಕ್ಷ ನೀಡಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಂಪೇಗೌಡರ ಕುರಿತು ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ ಏರ್ಪಡಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಲಾ ₹1 ಲಕ್ಷ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನ ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಅವರ ಜಯಂತಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದ ಡಿಸಿಎಂ ಡಿಕೆಶಿ ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ ಅಗತ್ಯ ಸೂಚನೆ ನೀಡಿದರು.