
ಉಡುಪಿ: ಕೆನರಾ ಬ್ಯಾಂಕ್ ಎಟಿಎಂ ಕಳ್ಳತನಕ್ಕೆ ಯತ್ನ ನಡೆದ ಘಟನೆ ಉಡುಪಿಯಲ್ಲಿ ನಡೆದಿದ್ದು, ಈ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲಿಸರು ಬಂಧಿಸಿದ್ದಾರೆ.
ಮಂಗಳೂರಿನ ಅಸೈಗೋಳಿ ನಿವಾಸಿ ಅಬೂಬಕ್ಕರ್ ಹಾಗೂ ಪಡೀಲ್ ನಿವಾಸಿ ಮೊಹಮ್ಮದ್ ಯಾಸೀನ್ ಬಂಧಿತ ಆರೋಪಿಗಳು. ಮಂಗಳೂರಿನ ಮೀನುಗಾರಿಕಾ ಬಂಧರಿನಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.
ಕೃತ್ಯಕ್ಕೆ ಬಳಸಿದ್ದ ಸ್ಕೂಟಿ, ಕತ್ತಿ, ಸುತ್ತಿಗೆ ಮೊದಲಾದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಫೆ.12ರಂದು ಉಡುಪಿಯಲ್ಲಿ ಆರೋಪಿಗಳು ಕೆನರಾ ಬ್ಯಾಂಕ್ ಎಟಿಎಂ ಬಾಕ್ಸ್ ಕಳ್ಳತನ ಮಡಲು ಯತ್ನಿಸಿದ್ದರು.