ಬೆಂಗಳೂರು: ಕರ್ನಾಟಕದ ಕೊಬ್ಬರಿ ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಹೆಚ್ಚುವರಿಯಾಗಿ 7500 ಮೆಟ್ರಿಕ್ ಟನ್ ಕೊಬ್ಬರಿ ಖರೀದಿಗೆ ಕೇಂದ್ರದಿಂದ ಒಪ್ಪಿಗೆ ನೀಡಲಾಗಿದೆ.
ಈ ವರ್ಷದಲ್ಲಿ 2999 ಮೆ. ಟನ್ ಕೊಬ್ಬರಿ ಖರೀದಿಸಲಾಗುತ್ತಿತ್ತು. 7500 ಮೆಟ್ರಿಕ್ ಟನ್ ಕೊಬ್ಬರಿ ಖರೀದಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ಹೆಚ್ಚುವರಿ ಕೊಬ್ಬರಿ ಖರೀದಿಸುವಂತೆ ಕೇಂದ್ರ ಸಚಿವ ವಿ. ಸೋಮಣ್ಣ ಮನವಿ ಮಾಡಿದ್ದರು. 10 ಸಾವಿರ ಮೆಟ್ರಿಕ್ ಟನ್ ಖರೀದಿಸುವಂತೆ ಸೋಮಣ್ಣ ಕೇಂದ್ರ ಕೃಷಿ ಇಲಾಖೆ ಸಚಿವರಿಗೆ ಮನವಿ ಮಾಡಿದ್ದರು. ವಿ. ಸೋಮಣ್ಣ ಮನವಿ ಮೇರೆಗೆ ಹೆಚ್ಚುವರಿ ಕೊಬ್ಬರಿ ಖರೀದಿಗೆ ಒಪ್ಪಿಗೆ ನೀಡಲಾಗಿದೆ.
ಇದರಿಂದ ಮಂಡ್ಯ, ಹಾಸನ, ತುಮಕೂರು, ದಕ್ಷಿಣ ಕನ್ನಡ ಹಾಗೂ ರಾಮನಗರ ಜಿಲ್ಲೆಯ ಕೊಬ್ಬರಿ ಬೆಳೆಗಾರರಿಗೆ ಅನುಕೂಲವಾಗಲಿದೆ. ಒಟ್ಟು 10,500 ಮೆಟ್ರಿಕ್ ಟನ್ ಕೊಬ್ಬರಿಯನ್ನು ಕೇಂದ್ರ ಸರ್ಕಾರ ಖರೀದಿಸಲಿದೆ.