alex Certify ಪ್ರಜ್ವಲ್ ರೇವಣ್ಣ ಕರೆತರಲು ಕೇಂದ್ರದ ನೆರವು ಬೇಕು; ಗೃಹ ಸಚಿವ ಪರಮೇಶ್ವರ್ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಜ್ವಲ್ ರೇವಣ್ಣ ಕರೆತರಲು ಕೇಂದ್ರದ ನೆರವು ಬೇಕು; ಗೃಹ ಸಚಿವ ಪರಮೇಶ್ವರ್ ಹೇಳಿಕೆ

Why should I not become CM, asks Karnataka Home Minister Parameshwara, says  Dalits should assert themselves

ಲೈಂಗಿಕ ಕಿರುಕುಳ ನೀಡಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದು, ವಿಚಾರಣೆಗೆ ಅವರನ್ನು ಕರೆ ತರಲು ಕೇಂದ್ರದ ನೆರವು ಬೇಕು. ಈ ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಯಾವ ರೀತಿ ಅವರನ್ನು ಕರೆತರಬಹುದು ಎಂಬುದನ್ನು ಪರಿಶೀಲಿಸಲಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ತಂಡ ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ನೋಟಿಸ್ ನೀಡಿದೆ. ಒಂದು ವೇಳೆ ಅವರು ವಿಚಾರಣೆಗೆ ಬಾರದಿದ್ದರೆ ಯಾವ ಕ್ರಮ ಕೈಗೊಳ್ಳಬೇಕೆಂಬುದನ್ನು ತನಿಖಾ ತಂಡ ನಿರ್ಧರಿಸುತ್ತದೆ ಎಂದರು.

ಇನ್ನು ಈ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ತಂಡ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ರೇವಣ್ಣ ಹಾಗೂ ಅವರ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ನೋಟಿಸ್ ನೀಡಿದೆ. ಅಲ್ಲದೆ ಸಂತ್ರಸ್ತೆಯರಿಂದ ಮಾಹಿತಿ ಪಡೆದುಕೊಳ್ಳಲು ಮಹಿಳಾ ಅಧಿಕಾರಿಯನ್ನು ನಿಯೋಜಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...