ನವದೆಹಲಿ : ಜನವರಿ 31 ರಿಂದ ಫೆಬ್ರವರಿ 9 ರವರೆಗೆ ನಡೆಯಲಿರುವ ಬಜೆಟ್ ಅಧಿವೇಶನಕ್ಕೆ ಸಂಸತ್ತು ಸಜ್ಜಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟನಾ ದಿನದಂದು ಉಭಯ ಸದನಗಳನ್ನುದ್ದೇಶಿಸಿ ಮಾತನಾಡಲಿದ್ದು, ನಿರ್ಣಾಯಕ ಹಣಕಾಸಿನ ಪ್ರಕಟಣೆಗಳಿಗೆ ವೇದಿಕೆ ಕಲ್ಪಿಸಲಿದ್ದಾರೆ.
ಯಾವುದೇ ಪ್ರಮುಖ ಶಾಸನಾತ್ಮಕ ಬದಲಾವಣೆಯನ್ನು ನಿರೀಕ್ಷಿಸಲಾಗಿಲ್ಲವಾದರೂ, ಮಹಿಳಾ ರೈತರಿಗಾಗಿ ಮಹತ್ವದ ಘೋಷಣೆಯಾಗುವ ಸಾಧ್ಯತೆಯಿದೆ.
ಕೆಲವು ದಿನಗಳ ಹಿಂದೆ ಭೂಮಾಲೀಕ ಮಹಿಳಾ ರೈತರಿಗೆ ವಾರ್ಷಿಕ ಪಾವತಿಯನ್ನು 12,000 ರೂ.ಗೆ ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗಿತ್ತು. ಈ ಹಿನ್ನೆಲೆ ಬಜೆಟ್ ಬಹಳ ಕುತೂಹಲ ಮೂಡಿಸಿದೆ.
ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ೨೦೨೪-೨೫ ನೇ ಸಾಲಿನ ಮುಂಗಡ ಪತ್ರ ಮಂಡನೆ ಮಾಡಲಿದ್ದಾರೆ. ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳಿಗೆ ಅದರಲ್ಲಿಯೂ ಹೆಚ್ಚು ಲೋಕಸಭಾ ಸ್ಥಾನಗಳಿರುವ ಉತ್ತರ ಪ್ರದೇಶ, ಬಿಹಾರ, ಮಧ್ಯ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಗೆ ಬರಪೂರ ಕೊಡುಗೆ ನೀಡುವ ಸಾಧ್ಯತೆ ಇದೆ.