ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಇಬ್ಬರು ನ್ಯಾಯಮೂರ್ತಿಗಳ ಕಾಯಂಗೆ ಕೇಂದ್ರದಿಂದ ಅನುಮೋದನೆ ನೀಡಲಾಗಿದೆ.
ಕೇಂದ್ರ ಸರ್ಕಾರ ಕರ್ನಾಟಕ ಹೈಕೋರ್ಟ್ ನ ಇಬ್ಬರು ಹೆಚ್ಚುವರಿ ನ್ಯಾಯಾಧೀಶರನ್ನು ಕಾಯಂ ನ್ಯಾಯಾಧೀಶರನ್ನಾಗಿ ನೇಮಕ ಮಾಡುವ ಪ್ರಸ್ತಾವಕ್ಕೆ ಮಂಗಳವಾರ ಅನುಮೋದನೆ ನೀಡಿದೆ.
ಹೆಚ್ಚುವರಿ ನ್ಯಾಯಮೂರ್ತಿಗಳಾದ ನ್ಯಾ. ಅನಂತ ರಾಮನಾಥ್ ಹೆಗಡೆ, ನ್ಯಾ. ಕೆ.ಎಸ್. ಹೇಮಲೇಖಾ ಅವರು ಕಾಯಂ ನ್ಯಾಯಮೂರ್ತಿಗಳಾಗಿ ನೇಮಕವಾಗಿದ್ದಾರೆ. ಹೆಚ್ಚುವರಿ ನ್ಯಾಯಮೂರ್ತಿ ಸಿದ್ದಯ್ಯ ರಾಚಯ್ಯ ಅವರ ಅವಧಿಯನ್ನು ನವೆಂಬರ್ 8 ರಿಂದ ಜಾರಿಗೆ ಬರುವಂತೆ ಒಂದು ವರ್ಷಗಳ ಕಾಲ ವಿಸ್ತರಿಸಲಾಗಿದೆ.
ಸುಪ್ರೀಂ ಕೋರ್ಟ್ ಕಿಲಿಜಿಯಂ ಆಗಸ್ಟ್ 31 ರಂದು ನ್ಯಾಯಮೂರ್ತಿಗಳಾದ ಅನಂತ ರಾಮನಾಥ್ ಹೆಗಡೆ ಮತ್ತು ಕೆ.ಎಸ್. ಹೇಮಲೇಖಾ ಅವರನ್ನು ಕಾಯಂ ನ್ಯಾಯಮೂರ್ತಿಗಳಾಗಿ ಮಾಡುವಂತೆ ಶಿಫಾರಸು ಮಾಡಿತ್ತು. ಈ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.