alex Certify GOOD NEWS: ಚಿಕ್ಕಮಗಳೂರು – ಬೆಂಗಳೂರು ರೈಲು ಪುನರಾರಂಭಕ್ಕೆ ಗ್ರೀನ್ ಸಿಗ್ನಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಚಿಕ್ಕಮಗಳೂರು – ಬೆಂಗಳೂರು ರೈಲು ಪುನರಾರಂಭಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: ಹೊಸ ವರ್ಷದ ದಿನದಂದೇ ಪ್ರಯಾಣಿಕರಿಗೆ ಸಂತಸದ ಸುದ್ದಿ…..ಚಿಕ್ಕಮಗಳೂರು-ಬೆಂಗಳೂರು ರೈಲು ಪುನರಾರಂಭಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ನಷ್ಟದ ಕಾರಣಕ್ಕೆ ಚಿಕ್ಕಮಗಳೂರು-ಬೆಂಗಳೂರು ಮಾರ್ಗದ ರೈಲು ಸಂಚಾರವನ್ನು ನವೆಂಬರ್ 24ರಿಂದ ಬಂದ್ ಮಾಡಲಾಗಿತ್ತು. ಇದರಿಂದ ಚಿಕ್ಕಮಗಳೂರು ಭಾಗದ ರೈಲು ಪ್ರಯಾಣಿಕರು ಸಮಸ್ಯೆಗೆ ಸಿಲುಕಿದ್ದರು. ರೈಲು ಮರಳಿ ಆರಂಭಿಸಬೇಕು ಎಂಬುದು ಜನರ ಒತ್ತಾಯವಾಗಿತ್ತು.

ಶಾಲೆಯಲ್ಲಿ ಗುಂಡು, ತುಂಡು ಪಾರ್ಟಿ; ಶಾಲೆಯಲ್ಲಿದ್ದ ವಸ್ತುಗಳನ್ನೆಲ್ಲ ದೋಚಿದ ಖದೀಮರು

ಕಾಫಿನಾಡಿನ ಜನರ ಬೇಡಿಕೆ ಗಂಭೀರವಾಗಿ ಪರಿಗಣಿಸಿದ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರಿಗೆ ಮನವಿ ಮಾಡಿದ್ದರು. ಇದೀಗ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು, ಚಿಕ್ಕಮಗಳೂರು-ಬೆಂಗಳೂರು ಮಾರ್ಗದ ರೈಲು ಸಂಚಾರ ಪುನರಾರಂಭಗೊಳ್ಳಲಿದೆ.

ಜನವರಿ 3 ಹಾಗೂ 4ರಿಂದ ಈ ಭಾಗದಲ್ಲಿ ರೈಲು ಸಂಚಾರ ಆರಂಭವಾಗಲಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...