
ನವದೆಹಲಿ: ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ನಡುವಿನ ಮಹದಾಯಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಅಂತಿಮ ವರದಿ ಸಲ್ಲಿಸುವ ಉದ್ದೇಶದಿಂದ ಮಹದಾಯಿ ಜಲವಿವಾದ ನ್ಯಾಯಮಂಡಳಿಯ ಅವಧಿಯನ್ನು ಕೇಂದ್ರ ಸರ್ಕಾರ ಶುಕ್ರವಾರ ವಿಸ್ತರಿಸಿ ಅಧಿಸೂಚನೆ ಹೊರಡಿಸಿದೆ.
ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ನಡುವಿನ ದಶಕಗಳ ಹಳೆಯ ವ್ಯಾಜ್ಯ ಪರಿಹಾರಕ್ಕೆ 2010ರ ನವೆಂಬರ್ 16ರಂದು ಅಂತಾರಾಜ್ಯ ಜಲವಿವಾದ ಕಾಯ್ದೆ 1956ರ ಅಡಿಯಲ್ಲಿ ಮಹದಾಯಿ ಜಲ ವಿವಾದ ನ್ಯಾಯಮಂಡಳಿಯನ್ನು ಸ್ಥಾಪಿಸಲಾಗಿತ್ತು.
ಮಹದಾಯಿ ನದಿ ಮತ್ತು ಅದರ ನದಿ ಕಣಿವೆ ಸಂಬಂಧ ಇರುವ ವಿವಾದಗಳ ಬಗ್ಗೆ ನಿರ್ಣಯ ತೆಗೆದುಕೊಳ್ಳಲು ನ್ಯಾಯಮಂಡಳಿಯನ್ನು ಸ್ಥಾಪಿಸಲಾಗಿತ್ತು. ಅಧ್ಯಯನಕ್ಕೆ ಮತ್ತಷ್ಟು ಸಮಯ ಬೇಕೆಂದು ನ್ಯಾಯಮಂಡಳಿ ಮನವಿ ಮಾಡಿದ್ದರಿಂದ ಅವಧಿಯನ್ನು ಆರು ತಿಂಗಳು ವಿಸ್ತರಿಸಲಾಗಿದೆ ಎಂದು ಕೇಂದ್ರ ಜಲ ಶಕ್ತಿ ಸಚಿವಾಲಯ ತಿಳಿಸಿದೆ.