ನವದೆಹಲಿ: ಪ್ರಾಕೃತಿಕ ವಿಪತ್ತು ನಿರ್ವಹಣೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಹೆಚ್ಚುವರಿಯಾಗಿ 1,816 ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಪರಿಹಾರ ಬಿಡುಗಡೆಗೆ ಅನುಮತಿ ನೀಡಿದೆ. ಕರ್ನಾಟಕ, ಹಿಮಾಚಲ ಪ್ರದೇಶ, ಮೇಘಾಲಯ, ಅಸ್ಸಾಂ, ನಾಗಾಲ್ಯಾಂಡ್ ಗಳಲ್ಲಿ 2022 ರಲ್ಲಿ ಸಂಭವಿಸಿದ ಪ್ರವಾಹ, ಭೂಕುಸಿತ, ಮೇಘ ಸ್ಫೋಟಗಳಿಗೆ ಸಂಬಂಧಿಸಿದಂತೆ ಈ ಪರಿಹಾರ ನೀಡಲಾಗುವುದು.
ಕರ್ನಾಟಕಕ್ಕೆ 941.04 ಕೋಟಿ ರೂಪಾಯಿ, ಅಸ್ಸಾಂಗೆ 520.46 ಕೋಟಿ ರೂ., ಹಿಮಾಚಲ ಪ್ರದೇಶಕ್ಕೆ 239.31 ಕೋಟಿ ರೂ., ಮೇಘಾಲಯಕ್ಕೆ 47.32 ಕೋಟಿ ರೂ. ನಾಗಾಲ್ಯಾಂಡ್ ಗೆ 239.31 ಕೋಟಿ ರೂಪಾಯಿ ಪರಿಹಾರ ಘೋಷಿಸಲಾಗಿದೆ.
ರಾಜ್ಯಕ್ಕೆ 941 ಕೋಟಿ ರೂ. ಬಿಡುಗಡೆ ಮಾಡಿದೆ. ಪ್ರಧಾನಿ ಮೋದಿಯವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದು, ಕರ್ನಾಟಕದ ಬಗ್ಗೆ ಪ್ರಧಾನಿ ಮೋದಿಯವರ ಕಾಳಜಿಯನ್ನು ಇದು ತೋರುತ್ತದೆ ಎಂದು ಹೇಳಿದ್ದಾರೆ.