alex Certify ರಾಜ್ಯಕ್ಕೆ ಕೇಂದ್ರದಿಂದ ಗುಡ್ ನ್ಯೂಸ್: ಹೆಚ್ಚುವರಿಯಾಗಿ 941 ಕೋಟಿ ರೂ. ನೆರೆ ಪರಿಹಾರ ನಿಧಿ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಕ್ಕೆ ಕೇಂದ್ರದಿಂದ ಗುಡ್ ನ್ಯೂಸ್: ಹೆಚ್ಚುವರಿಯಾಗಿ 941 ಕೋಟಿ ರೂ. ನೆರೆ ಪರಿಹಾರ ನಿಧಿ ಬಿಡುಗಡೆ

ನವದೆಹಲಿ: ಪ್ರಾಕೃತಿಕ ವಿಪತ್ತು ನಿರ್ವಹಣೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಹೆಚ್ಚುವರಿಯಾಗಿ 1,816 ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಪರಿಹಾರ ಬಿಡುಗಡೆಗೆ ಅನುಮತಿ ನೀಡಿದೆ. ಕರ್ನಾಟಕ, ಹಿಮಾಚಲ ಪ್ರದೇಶ, ಮೇಘಾಲಯ, ಅಸ್ಸಾಂ, ನಾಗಾಲ್ಯಾಂಡ್ ಗಳಲ್ಲಿ 2022 ರಲ್ಲಿ ಸಂಭವಿಸಿದ ಪ್ರವಾಹ, ಭೂಕುಸಿತ, ಮೇಘ ಸ್ಫೋಟಗಳಿಗೆ ಸಂಬಂಧಿಸಿದಂತೆ ಈ ಪರಿಹಾರ ನೀಡಲಾಗುವುದು.

ಕರ್ನಾಟಕಕ್ಕೆ 941.04 ಕೋಟಿ ರೂಪಾಯಿ, ಅಸ್ಸಾಂಗೆ 520.46 ಕೋಟಿ ರೂ., ಹಿಮಾಚಲ ಪ್ರದೇಶಕ್ಕೆ 239.31 ಕೋಟಿ ರೂ., ಮೇಘಾಲಯಕ್ಕೆ 47.32 ಕೋಟಿ ರೂ. ನಾಗಾಲ್ಯಾಂಡ್ ಗೆ 239.31 ಕೋಟಿ ರೂಪಾಯಿ ಪರಿಹಾರ ಘೋಷಿಸಲಾಗಿದೆ.

ರಾಜ್ಯಕ್ಕೆ 941 ಕೋಟಿ ರೂ. ಬಿಡುಗಡೆ ಮಾಡಿದೆ. ಪ್ರಧಾನಿ ಮೋದಿಯವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದು, ಕರ್ನಾಟಕದ ಬಗ್ಗೆ ಪ್ರಧಾನಿ ಮೋದಿಯವರ ಕಾಳಜಿಯನ್ನು ಇದು ತೋರುತ್ತದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...