
ಧಾರವಾಡ: 2024-25 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಬಿಳಿಜೋಳ ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‍ಗೆ ಬಿಳಿಜೋಳ ಹೈಬ್ರಿಡ್ 3,371 ರೂ. ಹಾಗೂ ಬಿಳಿಜೋಳ ಮಾಲ್ದಂಡಿ 3,421 ರೂ. ರಂತೆ ಧಾರವಾಡ ಜಿಲ್ಲೆಯ ರೈತರಿಂದ ಮಾತ್ರ ಖರೀದಿಸಲು ಸರ್ಕಾರದಿಂದ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಬಿಳಿಜೋಳ ಉತ್ಪನ್ನವನ್ನು ಖರೀದಿಸಲು ರೈತರ ನೋಂದಣಿಯು ಮಾರ್ಚ್ 25, 2025 ರಿಂದ ಜೋಳ ಖರೀದಿಗೆ ಸಂಬಂಧಿಸಿದಂತೆ ರೈತರ ನೋಂದಣಿ ಕಾರ್ಯವನ್ನು ಕೈಗೊಳ್ಳತಕ್ಕದ್ದು, ಹಾಗೂ ಎಪ್ರಿಲ್ 1, 2025 ರಿಂದ ಮೇ 31, 2025 ಅವಧಿಯವರೆಗೆ ಜೋಳ ಖರೀದಿ ಕಾರ್ಯವನ್ನು ನಿಗದಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಬಿಳಿಜೋಳ ಖರೀದಿ ಕೇಂದ್ರಗಳ ವಿವರ:
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹುಬ್ಬಳ್ಳಿ, ಎ.ಪಿ.ಎಂ.ಸಿ ಧಾರವಾಡ(ದೂ. ಸಂ: 0836-2004419), ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹುಬ್ಬಳ್ಳಿ, ಎ.ಪಿ.ಎಂ.ಸಿ ಹುಬ್ಬಳ್ಳಿಯಿಂದ ಹುಬ್ಬಳ್ಳಿ(ದೂ. ಸಂ: 0836-2004419), ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹುಬ್ಬಳ್ಳಿ, ಎ.ಪಿ.ಎಂ.ಸಿ ನವಲಗುಂದ(ದೂ. ಸಂ: 0836-2004419), ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹುಬ್ಬಳ್ಳಿ, ಎ.ಪಿ.ಎಂ.ಸಿ. ಕಲಘಟಗಿ(ದೂ. ಸಂ: 0836-2004419), ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹುಬ್ಬಳ್ಳಿ, ಎ.ಪಿ.ಎಂ.ಸಿ ಕುಂದಗೋಳ (ದೂ. ಸಂ: 0836-2004419), ಖರೀದಿ ಕೇಂದ್ರಗಳಾಗಿವೆ.
ಉತ್ಪನ್ನ ಖರೀದಿಸಲು ಅಗತ್ಯವಿರುವ ದಾಖಲೆಗಳು:
ಆಧಾರ್ ಗುರುತಿನ ಚೀಟಿಯ ಮೂಲ ಪ್ರತಿ ಹಾಗೂ ಅದರ ನಕಲು ಪ್ರತಿ. ಪಹಣಿ ಪತ್ರಿಕೆಯಲ್ಲಿರುವ ಹೆಸರಿನ ರೈತರ ಆಧಾರ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆ ಪಾಸ್ ಪುಸ್ತಕದ ನಕಲು ಪ್ರತಿ.
ಬಿಳಿಜೋಳ ಖರೀದಿಸಲು ಅನುಸರಿಸುವ ಕ್ರಮಗಳು:
ಜೋಳ ಚೆನ್ನಾಗಿ ಒಣಗಿರಬೇಕು, ತೇವಾಂಶವು ಶೇ.14 ಕ್ಕಿಂತ ಕಡಿಮೆ ಇರಬೇಕು. ಬಿಳಿಜೋಳ ಉತ್ಪನ್ನವು ಗುಣಮಟ್ಟದ ಗಾತ್ರ, ಬಣ್ಣ ಮತ್ತು ಆಕಾರವನ್ನು ಹೊಂದಿರಬೇಕು. ಗಟ್ಟಿಯಾಗಿರಬೇಕು ಮತ್ತು ಮಣ್ಣಿನಿಂದ ಬೇರ್ಪಡಿಸಲ್ಪಟ್ಟು ಸ್ವಚ್ಛವಾಗಿರಬೇಕು, ಸಾಣಿಗೆಯಿಂದ ಸ್ವಚ್ಛಗೊಳಿಸಿರಬೇಕು. ಕ್ರಿಮಿಕೀಟಗಳಿಂದ ಮುಕ್ತವಾಗಿರಬೇಕು.
ರೈತರಿಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಸಂಸ್ಥೆಯವರು ನೀಡುವ ಗೋಣಿ ಚೀಲದಲ್ಲಿ 50 ಕೆ.ಜಿ. ಪ್ರಮಾಣದಲ್ಲಿ ತುಂಬಬೇಕು. ಬಿಳಿಜೋಳ ಪ್ರತಿ ಎಕರೆಗೆ 20 ಕ್ವಿಂಟಾಲ್‍ನಂತೆ ಹಾಗೂ ಪ್ರತಿ ರೈತರಿಂದ ಗರಿಷ್ಟ 150 ಕ್ವಿಂಟಾಲ್ ವರೆಗೆ ಖರೀದಿ ಪ್ರಮಾಣ ನಿಗದಿಪಡಿಸಿ ಖರೀದಿಸಲಾಗುವುದು. ಸರ್ಕಾರದ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್‍ಗೆ ಬಿಳಿಜೋಳ ಹೈಬ್ರಿಡ್ 3,371 ರೂ. ಹಾಗೂ ಬಿಳಿಜೋಳ ಮಾಲ್ದಂಡಿ 3,421 ರೂ. ರಂತೆ ಬಿಳಿಜೋಳವನ್ನು ಖರೀದಿಸಲಾಗುವುದು.
ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಮಾತ್ರ ಖರೀದಿಸಲಾಗುವುದು. ಯಾವುದೇ ಸಂದರ್ಭದಲ್ಲಿ ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು. ಇದರ ಉಪಯೋಗವನ್ನು ರೈತರೇ ನೇರವಾಗಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಧಾರವಾಡ, ಹುಬ್ಬಳ್ಳಿ, ನವಲಗುಂದ, ಕಲಘಟಗಿ, ಕುಂದಗೋಳ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಯವರನ್ನು ಹಾಗೂ ಶಾಖಾ ವ್ಯವಸ್ಥಾಪಕರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ(ಕೆಎಸ್‍ಸಿಎಮ್‍ಎಫ್) ಹುಬ್ಬಳ್ಳಿ (ದೂರವಾಣಿ ಸಂಖ್ಯೆ: 0836-2004419) ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.