ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ಟೇಬಲ್ ಹುದ್ದೆಗಳಿಗೆ ಪಿಯುಸಿ ಪಾಸಾದವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಭಾರತೀಯ ಪುರುಷ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. 1130 ಹುದ್ದೆಗಳಿದ್ದು, ರಾಜ್ಯದಲ್ಲಿ 33 ಹುದ್ದೆಗಳಿವೆ. ಅಂಗೀಕೃತ ಶಿಕ್ಷಣ ಸಂಸ್ಥೆ, ವಿವಿಯಿಂದ ದ್ವಿತೀಯ ಪಿಯುಸಿಯನ್ನು ವಿಜ್ಞಾನ ವಿಷಯಗಳಲ್ಲಿ ಓದಿದವರು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆಗೆ ಕನಿಷ್ಠ 18 ವರ್ಷ ಗರಿಷ್ಠ 23 ವರ್ಷ ವಯೋಮಿತಿ ಆಗಿರಬೇಕು. ಅಭ್ಯರ್ಥಿಗಳ ವಯಸ್ಸನ್ನು 30.09.2024ಕ್ಕೆ ಪರಿಗಣಿಸಲಾಗುವುದು. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಐದು ವರ್ಷ, ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ದೈಹಿಕ ಸಹಿಷ್ಣುತೆ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ಮೂಲ ದಾಖಲಾತಿಗಳ ಪರಿಶೀಲನೆ, ಲಿಖಿತ ಪರೀಕ್ಷೆ, ಮೆಡಿಕಲ್ ಟೆಸ್ಟ್ ಮೂಲಕ ಮೆರಿಟ್ ಆಧಾರದಲ್ಲಿ ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು. ಆಂಗ್ಲ ಮತ್ತು ಹಿಂದಿ ಭಾಷೆಯಲ್ಲಿ ಮಾತ್ರ ಲಿಖಿತ ಪರೀಕ್ಷೆ ನಡೆಸಲಾಗುವುದು.
https://cisfrectt.cisf.gov.in ವೆಬ್ಸೈಟ್ ಗಮನಿಸಬಹುದಾಗಿದೆ. ಆಗಸ್ಟ್ 31ರಿಂದ ಸೆಪ್ಟೆಂಬರ್ 30ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.