alex Certify ಹೆದ್ದಾರಿಗಳಲ್ಲಿ ಗರಿಷ್ಠ ವೇಗ ಮಿತಿ ಹೆಚ್ಚಳ: ಮದ್ರಾಸ್ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಕೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆದ್ದಾರಿಗಳಲ್ಲಿ ಗರಿಷ್ಠ ವೇಗ ಮಿತಿ ಹೆಚ್ಚಳ: ಮದ್ರಾಸ್ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಕೇಂದ್ರ

ಹೆದ್ದಾರಿಗಳಲ್ಲಿ ಸಂಚರಿಸುವ ವಾಹನಗಳ ವೇಗದ ಮಿತಿಯನ್ನು ಗಂಟೆಗೆ 120 ಕಿಲೋಮೀಟರ್ ಎಂದು ನಿಗದಿಪಡಿಸುವ ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್ ತೀರ್ಪಿನ ವಿರುದ್ಧ ಕೇಂದ್ರವು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದ್ದಾರೆ.

ವಿವಿಧ ವರ್ಗಗಳ ರಸ್ತೆಗಳಿಗೆ ವಾಹನಗಳ ವೇಗದ ಮಿತಿಗಳನ್ನು ಪರಿಷ್ಕರಿಸಲು ಸಂಸತ್ತಿನಲ್ಲಿ ಮಂಡಿಸಲಾಗುವ ಮಸೂದೆಯನ್ನು ಅಂತಿಮಗೊಳಿಸಲು ಬಯಸುವುದಾಗಿ ಗಡ್ಕರಿ ತಿಳಿಸಿದ್ದಾರೆ.

BIG NEWS: ಮರಳು ದಂಧೆಯಲ್ಲಿ ಕಮಿಷನ್ ಆರೋಪ; ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಿದ ಶಾಸಕ ಹರತಾಳು ಹಾಲಪ್ಪ

”ಹೆದ್ದಾರಿಗಳಲ್ಲಿ ಸಂಚರಿಸುವ ವಾಹನಗಳ ವೇಗದ ಮಿತಿಯನ್ನು ಮದ್ರಾಸ್ ಹೈಕೋರ್ಟ್ ಕಡಿತಗೊಳಿಸಿದೆ. ಮದ್ರಾಸ್ ಹೈಕೋರ್ಟ್ ತೀರ್ಪಿನ ವಿರುದ್ಧ ನಾವು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದೇವೆ,” ಎಂದು ಅವರು ಹೇಳಿದ್ದಾರೆ.

ಹೆದ್ದಾರಿಗಳಲ್ಲಿ ಸಂಚರಿಸುವ ವಾಹನಗಳ ವೇಗದ ಮಿತಿಯನ್ನು ಗಂಟೆಗೆ 120 ಕಿ.ಮೀ.ಗೆ ನಿಗದಿ ಪಡಿಸಿದ ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ಕಳೆದ ವರ್ಷ ಮದ್ರಾಸ್ ಹೈಕೋರ್ಟ್ ರದ್ದುಗೊಳಿಸಿತ್ತು.

“ವಿವಿಧ ವರ್ಗದ ರಸ್ತೆಗಳಿಗೆ ವಾಹನಗಳಿಗೆ ವೇಗದ ಮಿತಿ ಏನಾಗಿರಬೇಕು ಎಂಬುದರ ಕುರಿತು ಯಾವುದೇ ಒಮ್ಮತವಿಲ್ಲ” ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು ತಿಳಿಸಿದ್ದು, ವಿವಿಧ ವರ್ಗಗಳ ರಸ್ತೆಗಳಿಗೆ ವಾಹನಗಳಿಗೆ ವೇಗದ ಮಿತಿಯನ್ನು ಸಿಂಕ್ ಮಾಡುವ ಅವಶ್ಯಕತೆಯಿದೆ ಎಂದು ಇದೇ ಸಂದರ್ಭದಲ್ಲಿ ಒತ್ತಿ ಹೇಳಿದರು.

ಕಳೆದ ವರ್ಷ, ಗಡ್ಕರಿ ಅವರು ಎಕ್ಸ್‌ಪ್ರೆಸ್‌ವೇಗಳಲ್ಲಿ ಗರಿಷ್ಠ ವೇಗದ ಮಿತಿಯನ್ನು ಗಂಟೆಗೆ 140 ಕಿಮೀಗೆ ಹೆಚ್ಚಿಸುವ ಪರವಾಗಿ ತಾವು ಇರುವುದಾಗಿ ತಿಳಿಸಿದ್ದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ; ನಾಲ್ಕು ಪಥದ ರಸ್ತೆಗಳಲ್ಲಿ ಗಂಟೆಗೆ ಕನಿಷ್ಠ 100 ಕಿಮೀ ವೇಗದ ಮಿತಿ ಇರಬೇಕು, ದ್ವಿಪಥ ರಸ್ತೆಗಳಲ್ಲಿ ಅದೇ ವೇಗದ ಮಿತಿ ಮತ್ತು ನಗರ ರಸ್ತೆಗಳು ಗಂಟೆಗೆ 80 ಕಿಮೀ ಮತ್ತು 75 ಕಿಮೀ ಆಗಿರಬೇಕು ಎಂದು ಗಡ್ಕರಿ ಹೇಳಿದ್ದರು.

ಎಕ್ಸ್‌ಪ್ರೆಸ್‌ವೇಗಳಲ್ಲಿ ಕಾರುಗಳ ಪ್ರಸ್ತುತ ವೇಗದ ಮಿತಿ ಗಂಟೆಗೆ 120 ಕಿಮೀ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ವೇಗದ ಮಿತಿ ಗಂಟೆಗೆ 100 ಕಿ.ಮೀ ಇದೆ.

ಈ ಕುರಿತು ಹೈಕೋರ್ಟ್ 12 ಪ್ರಶ್ನೆಗಳನ್ನು ಎತ್ತಿತ್ತು; ಅದರಲ್ಲಿ ಮೊದಲನೆಯದು, ವೇಗದ ಮಿತಿಯನ್ನು 120 ಕಿಮೀ/ಗಂಟೆಗೆ ಹೆಚ್ಚಿಸುವಂತೆ 2018ರ ತನ್ನ ಅಧಿಸೂಚನೆಯನ್ನು ಮರುಪರಿಶೀಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು.

ವೇಗದ ಮಿತಿಯನ್ನು ಹೆಚ್ಚಿಸಿರುವ ಕ್ರಮವನ್ನು ಕೇಂದ್ರವು ತನ್ನ ವರದಿಯಲ್ಲಿ ಸಮರ್ಥಿಸಿಕೊಂಡಿದೆ.

ಉತ್ತಮ ಎಂಜಿನ್ ತಂತ್ರಜ್ಞಾನ ಮತ್ತು ಸುಧಾರಿತ ರಸ್ತೆ ಮೂಲಸೌಕರ್ಯವನ್ನು ಗಮನದಲ್ಲಿಟ್ಟುಕೊಂಡು, ಮೋಟಾರು ವಾಹನಗಳ ವೇಗದ ಮಿತಿಗಳನ್ನು ಪರಿಶೀಲಿಸಲು ತಜ್ಞರ ಸಮಿತಿಯನ್ನು ರಚಿಸಲಾಗಿದೆ ಮತ್ತು ಅದರ ಶಿಫಾರಸುಗಳ ಪ್ರಕಾರ, ವಿವಿಧ ರಸ್ತೆಗಳಲ್ಲಿ ವಾಹನಗಳ ಗರಿಷ್ಠ ವೇಗವನ್ನು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದಿಂದ ಪರಿಷ್ಕರಿಸಲಾಗಿದೆ ಎಂದು ವರದಿ ತಿಳಿಸಿದೆ.

ಆದಾಗ್ಯೂ, ಉತ್ತಮ ಎಂಜಿನ್ ತಂತ್ರಜ್ಞಾನ ಮತ್ತು ಸುಧಾರಿತ ರಸ್ತೆ ಮೂಲಸೌಕರ್ಯಗಳಿದ್ದರೂ, ವಾಹನ ಚಾಲಕರಿಂದ ರಸ್ತೆ ಸುರಕ್ಷತಾ ನಿಯಮಗಳ ಅನುಸರಣೆಯಲ್ಲಿ ಯಾವುದೇ ಸುಧಾರಣೆಯಾಗಿಲ್ಲ ಎಂದು ಪೀಠವು ಇದೇ ಸಂದರ್ಭದಲ್ಲಿ ಗಮನಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...