ನವದೆಹಲಿ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 3.6 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ.
17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 3.6 ಲಕ್ಷ ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಈ ಮೂಲಕ ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಅನುಮೋದನೆ ನೀಡಲಾದ ಮನೆಗಳ ಸಂಖ್ಯೆ 1.14 ಕೋಟಿ ಆಗಲಿದೆ.
ಕೇಂದ್ರ ವಸತಿ ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ದುರ್ಗಾ ಶಂಕರ್ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರೀಯ ಮಂಜೂರಾತಿ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ 3.6 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಅನುಮೋದನೆ ನೀಡಲಾಗಿರುವ ಮನೆಗಳಲ್ಲಿ 89 ಲಕ್ಷ ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. 52 ಲಕ್ಷ ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಹಸ್ತಾಂತರ ಪ್ರಕ್ರಿಯೆ ನಡೆಯುತ್ತಿದೆ.