ನವದೆಹಲಿ: ರಾಜೀವ್ ಗಾಂಧಿ ಫೌಂಡೇಶನ್ ಲೈಸೆನ್ಸ್ ರದ್ದು ಮಾಡಲಾಗಿದೆ. ಕೇಂದ್ರ ಸರ್ಕಾರ ರಾಜೀವ್ ಗಾಂಧಿ ಫೌಂಡೇಶನ್ ರದ್ದು ಮಾಡಿದೆ.
ಸೋನಿಯಾ ಗಾಂಧಿ ಅಧ್ಯಕ್ಷರಾಗಿರುವ ಫೌಂಡೇಶನ್ ಗೆ ಮನಮೋಹನ್ ಸಿಂಗ್, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಪಿ. ಚಿದಂಬರಂ ಟ್ರಸ್ಟಿಗಳಾಗಿದ್ದಾರೆ.
ವಿದೇಶಿ ಧನ ಸಹಾಯ ಕಾನೂನು ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ರಾಜೀವ್ ಗಾಂಧಿ ಫೌಂಡೇಶನ್ ಪರವಾನಿಗೆಯನ್ನು ಕೇಂದ್ರ ಗೃಹ ಇಲಾಖೆ ರದ್ದು ಮಾಡಿದೆ.
ವಿದೇಶಿ ಕೊಡುಗೆಗಳಲ್ಲಿನ ಅಕ್ರಮಗಳ ಆರೋಪದ ಮೇಲೆ ಗಾಂಧಿ ಕುಟುಂಬಕ್ಕೆ ಸಂಬಂಧಿಸಿದ ಸರಕಾರೇತರ ಸಂಸ್ಥೆಗಳಾದ ರಾಜೀವ್ ಗಾಂಧಿ ಫೌಂಡೇಶನ್(ಆರ್‌ಜಿಎಫ್) ಮತ್ತು ರಾಜೀವ್ ಗಾಂಧಿ ಚಾರಿಟೇಬಲ್ ಟ್ರಸ್ಟ್(ಆರ್‌ಜಿಸಿಟಿ) ಯ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಪರವಾನಗಿಯನ್ನು ಕೇಂದ್ರವು ರದ್ದುಗೊಳಿಸಿದೆ. ಆರ್‌ಜಿಎಫ್ ಮತ್ತು ಆರ್‌ಜಿಸಿಟಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆ ಸಿಬಿಐಗೆ ವಹಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಗಾಂಧಿ ಕುಟುಂಬ ನಡೆಸುತ್ತಿರುವ ಎನ್‌ಜಿಒಗಳಲ್ಲಿ ಆಪಾದಿತ ಅಕ್ರಮಗಳನ್ನು ತನಿಖೆ ಮಾಡಲು 2020 ರಲ್ಲಿ ಗೃಹ ಸಚಿವಾಲಯ ರಚಿಸಿದ್ದ ಅಂತರ-ಸಚಿವಾಲಯ ಸಮಿತಿಯು ನಡೆಸಿದ ತನಿಖೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.